ದೇಶ

'ತುಕ್ಡೆ ತುಕ್ಡೆ ಗ್ಯಾಂಗ್' ಗಳನ್ನು ನಾವು ಎಂದೂ ನೋಡಿರಲಿಲ್ಲ: ಜೈಶಂಕರ್

ನಾವು ಓದುತ್ತಿದ್ದ ವೇಳೆ ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್​ಗಳು ಇರಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿವಿಯ ಇಂದಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ತುಕ್ಡೆ ತುಕ್ಡೆ ಗ್ಯಾಂಗ್' ಗಳನ್ನು ನಾವು ಎಂದೂ ನೋಡಿರಲಿಲ್ಲ: ಜೈಶಂಕರ್
ಜೈಶಂಕರ್
Published On :

ನವದೆಹಲಿ: ನಾವು ಓದುತ್ತಿದ್ದ ವೇಳೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್​ಗಳು ಇರಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿವಿಯ ಇಂದಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಜೆಎನ್‌ಯುನಲ್ಲಿನ ಘಟನೆ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿಮ್ಮ ಜೆಎನ್‌ಯು ಸಮಸ್ಯೆಗೆ ನಾನು ಏನು ಹೇಳಲು ಸಾಧ್ಯ. ನಿನ್ನೆಯೇ ನಿಮಗೆ ಸ್ಪಷ್ಟವಾಗಿ ಹೇಳಿದ್ದೇನೆ. ಜೆಎನ್‌ಯುನಲ್ಲಿ ನಾನು ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ನಾವು ಯಾವುದೇ ತುಕ್ಡೆ ತುಕ್ಡೆ ಗ್ಯಾಂಗ್‌ಗಳನ್ನು ನೋಡಿರಲಿಲ್ಲ ಎಂಬುದನ್ನು ಖಂಡಿತವಾಗಿ ನಿಮಗೆ ಹೇಳಬಲ್ಲೆ ಎಂದಿದ್ದಾರೆ. 

ಕ್ಯಾಂಪಸ್​ನಲ್ಲಿ ನಡೆದ ಹಿಂಸಾಚಾರ ಖಂಡನೀಯ. ಅದು ವಿಶ್ವವಿದ್ಯಾನಿಲಯದ ಸಂಪ್ರದಾಯವೂ ಅಲ್ಲ, ಸಂಸ್ಕೃತಿಯೂ ಅಲ್ಲ ಎಂದು ಆ ವಿವಿಯ ಹಳೆಯ ವಿದ್ಯಾರ್ಥಿ ಎಂಬ ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ ಗಮನಸೆಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.