ದೇಶ

ಸಾಯಿ ಬಾಬಾ ಜನ್ಮಸ್ಥಳ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ: ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಶಿರಡಿ ಮಂದಿರ ಬಂದ್ 

ಪರ್ಬಾನಿಯಲ್ಲಿರುವ ಪತ್ರಿ ಸಾಯಿಬಾಬಾ ಜನ್ಮಸ್ಥಳ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿರುವುದು ಹೊಸ ಸಂಚಲಕ್ಕೆ ಕಾರಣವಾಗಿದ್ದು, ಶಿರಡಿ ಮಂದಿರವನ್ನು ಅನಿರ್ದಿಷ್ಟಾವಧಿಯವರೆಗೆ ಮುಚ್ಚಲು ಕರೆ ನೀಡಲಾಗಿದೆ.

ಸಾಯಿ ಬಾಬಾ ಜನ್ಮಸ್ಥಳ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ: ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಶಿರಡಿ ಮಂದಿರ ಬಂದ್ 
Published On :

ಶಿರಡಿ: ಪರ್ಬಾನಿಯಲ್ಲಿರುವ ಪತ್ರಿ ಸಾಯಿಬಾಬಾ ಜನ್ಮಸ್ಥಳ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿರುವುದು ಹೊಸ ಸಂಚಲಕ್ಕೆ ಕಾರಣವಾಗಿದ್ದು, ಶಿರಡಿ ಮಂದಿರವನ್ನು ಅನಿರ್ದಿಷ್ಟಾವಧಿಯವರೆಗೆ ಮುಚ್ಚಲು ಕರೆ ನೀಡಲಾಗಿದೆ.


ಸಾಯಿಬಾಬಾ ಅವರ ಜನ್ಮಸ್ಥಳದ ಬಗ್ಗೆ ವದಂತಿ ಹಬ್ಬಿದ ಹಿನ್ನಲೆಯಲ್ಲಿ ಶಿರಡಿ ಮಂದಿರವನ್ನು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಚ್ಚುತ್ತಿದ್ದೇವೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನ ಬಿ ವಕ್ಚೌರ್ ಹೇಳಿದ್ದಾರೆ.


ಇಂದು ಸಂಜೆ ಗ್ರಾಮಸ್ಥರ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು. ಶಿರಡಿಗೆ ಬಂದ ಭಕ್ತರಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೂಡ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.