ದೇಶ

ಉತ್ತರ ಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಕಾನ್ಪುರ ಘಟನೆ ಮತ್ತೊಂದು ಸಾಕ್ಷಿ: ರಾಹುಲ್ ಗಾಂಧಿ

ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಕಾನ್ಪುರ ಘಟನೆ ಮತ್ತೊಂದು ಸಾಕ್ಷಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ಕಾನ್ಪುರ ಎನ್ಕೌಂಟರ್ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಈ ಘಟನೆ ಮತ್ತೊಂದು ಸಾಕ್ಷ್ಯಾಗಿದೆ. ಪೊಲೀಸರೇ ಸುರಕ್ಷಿತವಾಗಿಲ್ಲ ಎಂದರೆ, ಸಾರ್ವಜನಿಕರ ಕತೆಯೇನು? ಎಂದು ಪ್ರಶ್ನಿಸಿದ್ದಾರೆ. 

ಘಟನೆಯಲ್ಲಿ ಸಾವನ್ನಪ್ಪಿದ ಪೊಲೀಸರ ಕುಟುಂಬಸ್ಥರ ಕುರಿತು ಸಂತಾಪ ಸೂಚಿಸುತ್ತೇನೆ. ಗಾಯಗೊಂಡಿರುವ ಪೊಲೀಸರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.