ದೇಶ

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಇಂಡೋ-ಚೀನಾ ಸಂಘರ್ಷ ಸಂಬಂಧ ಪ್ರಧಾನಿ ಮೋದಿ ಹೇಳಿಕೆ

ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಇಂಡೋ-ಚೀನಾ ಸಂಘರ್ಷ ಸಂಬಂಧ ಪ್ರಧಾನಿ ಮೋದಿ ಹೇಳಿಕೆ
ಪ್ರಧಾನಿ ಮೋದಿ
Published On :

ನವದೆಹಲಿ: ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಾರಕ ಕೊರೋನಾ ವೈರಸ್ ನಿರ್ವಹಣೆ ವಿಚಾರವಾಗಿ ನಿನ್ನೆಯಿಂದ ನಡೆಯುತ್ತಿರುವ ಎಲ್ಲ ರಾಜ್ಯಗಳ ಸಿಎಂಗಳ ಮ್ಯಾರಥಾನ್ ಸಭೆಯ 2ನೇ ದಿನ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಮೊದಲು ಹುತಾತ್ಮ ಸೈನಿಕರಿ ಆತ್ಮಕ್ಕೆ 2 ನಿಮಿಷ ಶಾಂತಿ ಕೋರಿದರು. ಬಳಿಕ ಸೈನಿಕರ ಬಲಿದಾನದ ಕುರಿತು ಮಾತನಾಡಿದ ಪ್ರಧಾನಿ ಮೋದಿ, 'ಭಾರತ ಶಾಂತಿಯನ್ನು ಬಯಸುತ್ತದೆ ಆದರೆ ಪ್ರಚೋದಿಸಿದಾಗ, ಯಾವುದೇ ರೀತಿಯ ಪರಿಸ್ಥಿತಿ ಇರಲಿ ಭಾರತ ಅದಕ್ಕೆ ಸೂಕ್ತ ತಿರುಗೇಟು ನೀಡಲು ಸಮರ್ಥವಾಗಿದೆ. ಈ ಮೂಲಕ ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತೇನೆ. ಅದೇನೆಂದರೆ ಸೈನಿಕರ ಬಲಿದಾನ ವ್ಯರ್ಥವಾಗದು. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾದದ್ದು. ಆದಕೆ ಪ್ರಚೋದಿಸಿದರೆ ಅದಕ್ಕೆ ತಕ್ಕ ಶಾಸ್ತಿ ಖಂಡಿತ ಮಾಡುತ್ತೇವೆ ಎಂದು ಹೇಳಿದರು.

ಲಡಾಖ್ ನಲ್ಲಿ ವೀರಮರಣವನ್ನಪ್ಪಿದ ಸೈನಿಕರ ಶೌರ್ಯ ಅಪ್ರತಿಮವಾದದ್ದು. ಅವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಈ ಬಗ್ಗೆ ಯಾರಿಗೂ ಸ್ವಲ್ಪವೂ ಅನುಮಾನ ಬೇಡ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನು ಇಂದಿನ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 15 ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 

Related Article

ಲಡಾಖ್ ಗಡಿ ಸಂಘರ್ಷ: ಜೂನ್ 19 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

ಲಡಾಕ್ ನಲ್ಲಿ ಭಾರತೀಯ ಸೈನಿಕರ ಪ್ರಾಣತ್ಯಾಗ ಅತೀವ ನೋವು ತಂದಿದೆ: ರಾಜನಾಥ್ ಸಿಂಗ್

ಲಡಾಖ್ ಸಂಘರ್ಷ: 17 ದಿನದ ಹಿಂದೆ ಹುಟ್ಟಿದ ತನ್ನ ಮಗುವಿನ ಮುಖವನ್ನೂ ನೋಡದೆ ಯೋಧ ಕೆಕೆ ಓಝಾ ಹುತಾತ್ಮ!

ವಿದೇಶಿ ಯೋಧರು ಗಡಿ ಪ್ರವೇಶಿಸಿದ್ದರೂ, 7 ವಾರಗಳಿಂದ ಪ್ರಧಾನಿ ಮೋದಿ ಮೌನವಾಗಿದದ್ದೇಕೆ: ಚಿದಂಬರಂ ಪ್ರಶ್ನೆ

ಪೂರ್ವ ಲಡಾಕ್ ನಲ್ಲಿ ಘರ್ಷಣೆ: ನಾಲ್ವರು ಉನ್ನತ ಸಚಿವರು, ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ತಡರಾತ್ರಿ ಮಾತುಕತೆ

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ

ಲಡಾಖ್ ಗಡಿಯಲ್ಲಿ ಚೀನಾ ಹತ್ಯಾಕಾಂಡ: ನನಗಾಗಿರುವ ನೋವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ- ರಾಹುಲ್ ಗಾಂಧಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.