ಲಡಾಖ್ ಗಡಿಯಲ್ಲಿ ಚೀನಾ ಹತ್ಯಾಕಾಂಡ: ನನಗಾಗಿರುವ ನೋವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ- ರಾಹುಲ್ ಗಾಂಧಿ
ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ನಡೆಸಿದ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ನಡೆಸಿದ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚೀನಾ ನಡೆಸಿದ ದಾಳಿಯಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದು, ನನಗಾಗುತ್ತಿರುವ ನೋವನ್ನು ಪದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಯೋಧರ ಕುರಿತು ನಾನು ಅನುಭವಿಸುತ್ತಿರುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ಸಂತಾಪ ಸೂಚಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆಂದು ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾಡಿರುವ ಅವರು, ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಮೋದಿಯೇಕೆ ಮುಚ್ಚಿಡುತ್ತಿದ್ದಾರೆ? ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಎಂದು ನಮಗೆ ಹೇಳಿ. ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಗೆ ಎಷ್ಟು ಧೈರ್ಯವಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


