ದೇಶ

ವೀರ ಯೋಧರ ತ್ಯಾಗ ವ್ಯರ್ಥವಾಗದು, ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದ್ಧ: ವಾಯುಪಡೆ ಮುಖ್ಯಸ್ಥ

ಲಡಾಖ್'ನ ಗಾಲ್ವಾವ್ ಕಣಿವೆಯ ವೀರ ಯೋಧರ ತ್ಯಾಗ, ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ. ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್.ಭದೌರಿಯಾ ಅವರು ಶನಿವಾರ ಹೇಳಿದ್ದಾರೆ.

ವೀರ ಯೋಧರ ತ್ಯಾಗ ವ್ಯರ್ಥವಾಗದು, ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದ್ಧ: ವಾಯುಪಡೆ ಮುಖ್ಯಸ್ಥ
ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್.ಭದೌರಿಯಾ
Published On :

ಹೈದರಾಬಾದ್: ಲಡಾಖ್'ನ ಗಾಲ್ವಾವ್ ಕಣಿವೆಯ ವೀರ ಯೋಧರ ತ್ಯಾಗ, ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ. ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್.ಭದೌರಿಯಾ ಅವರು ಶನಿವಾರ ಹೇಳಿದ್ದಾರೆ. 

ಹೈದರಾಬಾದ್'ನ ವಾಯುಪಡೆ ಅಕಾಡೆಮಿಯಲ್ಲಿ ಶನಿವಾರ ಭದೌರಿಯಾ ಅವರ ಸಮ್ಮುಕದಲ್ಲಿ ಸಂಯೋಜಿತ ಪದವಿ ಪರೇಡ್ ನಡೆಯಿತು. ಈ ವೇಳೆ ಮಾತನಾಡಿರುವ ಅವರು, ಯಾವುದೇ ಆಕಸ್ಮಿಕಗಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ನಾವು ಸಿದ್ಧರಿದ್ದೇವೆ ಎಂಬುದು ಸ್ಷಷ್ಟವಾಗಿರಬೇಕು. ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವ ಸನ್ನದ್ಧರಾಗಿದ್ದೇವೆ. ಅಲ್ಲದೆ, ವೀರ ಯೋಧರ ತ್ಯಾಗ ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 

ಗಾಲ್ವಾನ್ ಕಣಿವೆಯಲ್ಲಿ ಗಡಿ ರಕ್ಷಣೆಗಾಗಿ ತ್ಯಾಗ ಮಾಡಿದ ಕರ್ನಲ್ ಸಂತೋಷ್ ಬಾಬು ಮತ್ತು ಅವರ ವೀರ ಪಡೆಗೆ ನಾವೆಲ್ಲರೂ ಗೌರವ ಸಲ್ಲಿಸೋಣ. ಅತ್ಯಂತ ಸವಾಲಿನ ಪರಿಸ್ಥಿತಿಯಲ್ಲೂ ಹೋರಾಡಿದ ಧೈರ್ಯಶಾಲಿಗಳ ಸೌರ್ಯ, ಭಾರತದ ಸಾರ್ವಭೌಮತ್ವವನ್ನು ಯಾವುದೇ ಹಂತಲ್ಲೂ ರಕ್ಷಿಸುವ ನಮ್ಮ ಸಂಕಲ್ಪವನ್ನು ಪ್ರದರ್ಶಿಸುತ್ತದೆ ಎಂದು ತಿಳಿಸಿದ್ದಾರೆ. 

ಚೀನಾ ಸಂಘರ್ಷ ಬೆನ್ನಲ್ಲೇ ಗಡಿಯಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಾರತದ ರಕ್ಷಣಾಪಡೆಗಳ ಸಾಮರ್ಥ್ಯದ ಮೇಲೆ ಯಾರೊಬ್ಬರೂ ಸಂದೇಹ ಪಡಬಾರದು ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.