ನಿರ್ಭಯಾ ಹಂತಕರಿಗೆ ನಾಳೆ ಗಲ್ಲು ಶಿಕ್ಷೆ ಜಾರಿ ಇಲ್ಲ: ದೆಹಲಿ ಕೋರ್ಟ್
ತೀವ್ರ ಕುತೂಹಲ ಕೆರಳಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಹೇಳಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಹೇಳಿದೆ.
ಈ ಹಿಂದೆ ದೆಹಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಹತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಅದರಂತೆ ನಾಳೆ ಎಲ್ಲ ನಾಲ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಇದೀಗ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ ಈ ಹಿಂದೆ ಹೊರಡಿಸಿದ್ದ ಡೆತ್ ವಾರೆಂಟ್ ಗೆ ತಡೆಯಾಜ್ಞೆ ನೀಡಿದ್ದು ಹೊಸದಾಗಿ ಡೆತ್ ವಾರಂಟ್ ಜಾರಿ ಮಾಡುವಂತೆ ಸೂಚಿಸಿದೆ.
ದೆಹಲಿ ಖೈದಿಗಳ ನಿಯಮಾವಳಿಗಳ ಪ್ರಕಾರ ಗಲ್ಲು ಶಿಕ್ಷೆಗೆ ಗುರಿಯಾದ ಯಾವುದೇ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡರೆ ಅಪರಾಧಿಗೆ ಅಂದಿನಿಂದ 14 ದಿನಗಳ ಕಾಲ ಕಾಲಾವಕಾಶ ನೀಡಬೇಕು. ಇದೇ ಕಾರಣಕ್ಕೆ ನ್ಯಾಯಾಲಯ ಗಲ್ಲು ಶಿಕ್ಷೆ ಜಾರಿಯನ್ನು ತಡೆ ಹಿಡಿದಿದೆ ಎನ್ನಲಾಗುತ್ತಿದೆ.
ಅಲ್ಲದೆ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಕ್ಷಮಾದಾನ ಅರ್ಜಿಯ ಇತ್ಯರ್ಥವಾಗುವವರೆಗೂ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂಬ ವಾದವೂ ಕೂಡ ಕೇಳಿಬರುತ್ತಿದೆ.
Related Article
ನಿರ್ಭಯಾ: 'ಬೆಂಕಿಯೊಂದಿಗೆ ಸರಸ ಬೇಡ'; ಅಪರಾಧಿಗಳ ಪರ ವಕೀಲರಿಗೆ ದೆಹಲಿ ಕೋರ್ಟ್ ಛಾಟಿ
ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ವಜಾ, ನಾಳೆ ನಾಲ್ವರಿಗೂ ಗಲ್ಲು ಫಿಕ್ಸ್!
ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
ನಿರ್ಭಯಾ ಹತ್ಯಾಚಾರಿಗಳಿಗೆ ನಾಳೆ ಗಲ್ಲು ಫಿಕ್ಸ್..?; ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ!
ಗಲ್ಲು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ವಿಫಲ: ನಿರ್ಭಯಾ ಹತ್ಯಾಚಾರಿಯ ಮತ್ತೊಂದು ಅರ್ಜಿ 'ಸುಪ್ರೀಂ'ನಿಂದ ವಜಾ!
12 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಮರಕ್ಕೆ ನೇಣು ಹಾಕಿದ ಅಪ್ರಾಪ್ತರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


