ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
ನಿರ್ಭಯಾ ಹತ್ಯಾಚಾರಿಗಳ ಗಲ್ಲುಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ನವದೆಹಲಿ: ನಿರ್ಭಯಾ ಹತ್ಯಾಚಾರಿಗಳ ಗಲ್ಲುಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಈ ಕುರಿತಂತೆ ಅಪರಾಧಿ ಪವನ್ ಗುಪ್ತಾ ಪರ ವಕೀಲ ಎಪಿ ಸಿಂಗ್ ಅವರು ಇಂದು ದೆಹಲಿಯ ಪಾಟಿಯಾಲಾ ಕೋರ್ಟ್ ಗೆ ಮಾಹಿತಿ ನೀಡಿದ್ದು, ತಮ್ಮ ಕಕ್ಷೀದಾರ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಈ ಅರ್ಜಿಯ ಇತ್ಯರ್ಥವಾಗುವವರೆಗೂ ಗಲ್ಲು ಶಿಕ್ಷೆಜಾರಿ ಮುಂದೂಡುವಂತೆ ಮನವಿ ಮಾಡಿದ್ದರು. ಆದರೆ ಪವನ್ ಗುಪ್ತಾ ಸಲ್ಲಿಸಿದ್ದ ಈ ಕ್ಯುರೇಟಿವ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ವಜಾಗೊಳಿಸಿದ್ದಾರೆ. ಈ ಹಿಂದೆ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿತ್ತು.
ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತ!
ಇನ್ನು 2012ರಲ್ಲಿ ಈ ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತನಾಗಿದ್ದ. ಈ ಅಂಶವನ್ನು ಪರಿಗಣಿಸದೇ ಕೋರ್ಟ್ ಗಲ್ಲು ಶಿಕ್ಷೆ ಜಾರಿ ಮಾಡಿತ್ತು. ಹೀಗಾಗಿ ಇದೀಗ ಈ ಎಲ್ಲ ಅಂಶಗಳನ್ನು ಸೇರಿಸಿ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ವಕೀಲ ಎಪಿ ಸಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಹಿಂದೆ ಫೆ. 5ಕ್ಕೆ ಅಕ್ಷಯ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


