ನಿರ್ಭಯಾ ಅಪರಾಧಿಗಳಿಗೆ ಹೊಸ ಡೆತ್ ವಾರಂಟ್ ಜಾರಿ: ಮಾ. 20ಕ್ಕೆ ಗಲ್ಲು ಫಿಕ್ಸ್ ಮಾಡಿದ ದೆಹಲಿ ಕೋರ್ಟ್
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ಶಿಕ್ಷೆ ಜಾರಿಗಾಗಿ ದೆಹಲಿ ನ್ಯಾಯಾಲಯ ಹೊಸ ಡೆತ್ ವಾರಂಟ್ ಹೊರಡಿಸಿದೆ. . ಅವರನ್ನು ಮಾರ್ಚ್ 20, 2020 ರಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲು ನ್ಯಾಯಾಲಯ ಆದೇಶಿಸಿದೆ.

ನವದೆಹಲಿ: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ಶಿಕ್ಷೆ ಜಾರಿಗಾಗಿ ದೆಹಲಿ ನ್ಯಾಯಾಲಯ ಹೊಸ ಡೆತ್ ವಾರಂಟ್ ಹೊರಡಿಸಿದೆ. . ಅವರನ್ನು ಮಾರ್ಚ್ 20, 2020 ರಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲು ನ್ಯಾಯಾಲಯ ಆದೇಶಿಸಿದೆ.
2012 ರ ಡಿಸೆಂಬರ್‌ನಲ್ಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಸಲುವಾಗಿ ದೆಹಲಿ ನ್ಯಾಯಾಲಯದಲ್ಲಿ ಇಂದು (ಗುರುವಾರ) ವಿಚಾರಣೆ ನಡೆದಿದೆ.
ನಿನ್ನೆ ಸರ್ಕಾರವು ದೆಹಲಿ ಅತ್ಯಾಚಾರಿಗಳಿಗೆ ಹೊಸ ಡೆತ್ ವಾರಂಟ್ ಜಾರಿಗೆ ಮನವಿ ಸಲ್ಲಿಸಿದ್ದ ಹಿನ್ನೆಲೆ ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಕೋರಿ ಅಪರಾಧಿಗಳಿಗೆ ನೋಟಿಸ್ ನೀಡಿದ್ದರು ಹಾಗೂ ಗುರುವಾರ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ್ದರು.
ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತವಾದ ಮರುದಿನವೇ ಕೋರ್ಟ್ ಅಪರಾಧಿಗಳಿಗೆ ಹೊಸ ಡೆತ್ ವಾರಂಟ್ ನೀಡಿದೆ.
Related Article
ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ನ್ಯಾಯಾಲಯದಿಂದ ನಾಳೆ ಹೊಸ ಡೆತ್ ವಾರಂಟ್ ಜಾರಿ
ನಿರ್ಭಯಾ ಕೇಸ್: ಗಲ್ಲು ಜಾರಿಗೆ ಇದ್ದ ಕಡೇಯ ಅಡ್ಡಿ ನಿವಾರಣೆ? ಪವನ್ ಗುಪ್ತಾ ಕ್ಷಮಾದಾನ ಅರ್ಜಿ ವಜಾ
ನಿರ್ಭಯಾ ಹಂತಕರ ಗಲ್ಲಿಗೇರಿಸಲು ಸಕಲ ಸಿದ್ಧತೆಗಳು ನಡೆದಿವೆ: ತಿಹಾರ್ ಜೈಲಾಧಿಕಾರಿಗಳು
ನಿರ್ಭಯಾ ಹಂತಕರಿಗೆ ನಾಳೆ ಗಲ್ಲು ಶಿಕ್ಷೆ ಜಾರಿ ಇಲ್ಲ: ದೆಹಲಿ ಕೋರ್ಟ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


