ದೇಶ

ಕೊರೋನಾ ವೈರಸ್: ತಮಿಳುನಾಡಿನಲ್ಲಿ 3ನೇ ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

ದೇಶದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ತಮಿಳುನಾಡಿನಲ್ಲಿ ಮತ್ತೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ಕೊರೋನಾ ವೈರಸ್: ತಮಿಳುನಾಡಿನಲ್ಲಿ 3ನೇ ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ತಮಿಳುನಾಡಿನಲ್ಲಿ ಮತ್ತೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ತಮಿಳುನಾಡಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ 3ಕ್ಕೆ ಮತ್ತು ದೇಶದಲ್ಲಿ 182ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 24 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆಯಾಗಿದೆ.

ಐರ್ಲ್ಯಾಂಡ್ ನಿಂದ ಚೆನ್ನೈಗೆ ಆಗಮಿಸಿದ 21 ವರ್ಷದ ಯುವಕನಿಗೆ ಇಂದು ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ಇನ್ನು ಚಂಡೀಗಢದಲ್ಲಿ ಲಂಡನ್ ನಿಂದ ಆಗಮಿಸಿದ 23 ವರ್ಷದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ.

ದೇಶಾದ್ಯಂದ ವ್ಯಾಪಕವಾಗಿ ಹಬ್ಬುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಗೆ ಭಾರತದಲ್ಲಿ ನಾಲ್ವರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.