ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳ ಸಭೆ ಕರೆದ ಪಿಎಂ ಮೋದಿ
ವಿಶಾಖಪಟ್ಟಣಂ ಅನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.

ನವದೆಹಲಿ: ವಿಶಾಖಪಟ್ಟಣಂ ಅನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.
ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಇಂದು ನಸುಕಿನ ಜಾವ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡುತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿ ಸಾವಿರಾರು ಮಂದಿ ಅಸ್ವಸ್ಥಕ್ಕೀಡಾಗಿದ್ದಾರೆ.
ಈ ಕುರಿತು ಇಂದು ಬೆಳಗ್ಗೆ ಗೃಹ ಸಚಿವಾಲಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡ ಪ್ರಧಾನಿ ಅಲ್ಲಿನ ಪರಿಸ್ಥಿತಿ ಬಗ್ಗೆ ತಿಳಿದುಕೊಂಡರು. ಅಲ್ಲಿ ಸದ್ಯ ಪರಿಸ್ಥಿತಿಯನ್ನು ನಿಗಾವಹಿಸಲಾಗುತ್ತಿದೆ. ಗೃಹ ಸಚಿವ ಅಮಿತಾ ಶಾ ಕೂಡ ಘಟನೆ ತೀರಾ ದುರದೃಷ್ಟಕರ ಎಂದಿದ್ದಾರೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಕರೆ: ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ ಅಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದರು. ಎಲ್ಲಾ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಭರವಸೆ ಕೊಟ್ಟರು.
ವಿಶಾಖಪಟ್ಟಣಂನ ಫ್ಯಾಕ್ಟರಿಯ ಸುತ್ತಮುತ್ತ ನಿವಾಸಿಗಳ ಸುರಕ್ಷತೆಗೆ ನಾನು ಈ ಸಂದರ್ಭದಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


