ದೇಶ

65ನೇ ಕರ್ನಾಟಕ ರಾಜ್ಯೋತ್ಸವ: ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ

65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

65ನೇ ಕರ್ನಾಟಕ ರಾಜ್ಯೋತ್ಸವ: ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ
Published On :

ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

ಪ್ರಧಾನಿ ಮೋದಿಯವರು ಕನ್ನಡದಲ್ಲಿಯೇ ಶುಭಾಶಯ ಕೋರಿರುವ ಹಿನ್ನಲೆಯಲ್ಲಿ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ರೀ ಟ್ವೀಟ್ ಮಾಡುತ್ತಿದ್ದಾರೆ. ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.