ದೇಶ

ಕಳೆದೆರಡು ದಿನಗಳಿಂದ ನನಗೆ ಮತ್ತೆ ಗೃಹಬಂಧನ: ಮೆಹಬೂಬಾ ಮುಫ್ತಿ ಆರೋಪ

ವಿಧಿ 370ರ ರದ್ಧತಿ ಬೆನ್ನಲ್ಲೇ ಗೃಹ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ.

ಕಳೆದೆರಡು ದಿನಗಳಿಂದ ನನಗೆ ಮತ್ತೆ ಗೃಹಬಂಧನ: ಮೆಹಬೂಬಾ ಮುಫ್ತಿ ಆರೋಪ
ಮೆಹಬೂಬ ಮುಫ್ತಿ
Published On :

ಶ್ರೀನಗರ: ವಿಧಿ 370ರ ರದ್ಧತಿ ಬೆನ್ನಲ್ಲೇ ಗೃಹ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ಮೆಹಬೂಬಾ ಮುಫ್ತಿ ಅವರೇ ಹೇಳಿಕೊಂಡಿದ್ದು, ಈ ಕುರಿತಂತೆ ಟ್ವೀಟ್ ಮಾಡಿದ್ದು, ಕಳೆದ ಎರಡು ದಿನಗಳಿಂದ ನನ್ನ ಕುಟುಂಬವನ್ನು ಮತ್ತೆ ಅಕ್ರಮವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ. ಅಂತೆಯೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಪುಲ್ವಾಮದಲ್ಲಿರುವ ತಮ್ಮ ಪಕ್ಷದ  ನಾಯಕ ವಾಹೀದ್ ಉರ್ ರೆಹಮಾನ್ ಅವರ ಕುಟುಂಬವನ್ನು ಭೇಟಿ ಮಾಡಲು ಬಿಡುತ್ತಿಲ್ಲ. ವಾಹೀದ್ ರನ್ನು ಅನಗತ್ಯವಾಗಿ ಬಂಧಿಸಲಾಗಿದ್ದು, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲಾಗಿದೆ. ಕೇವಲ ನನ್ನನ್ನು ಮಾತ್ರವಲ್ಲ ನನ್ನ ಮಗಳನ್ನು ಕೂಡ ಗೃಹ ಬಂಧನಕ್ಕೀಡು ಮಾಡಲಾಗಿದೆ ಎಂದು ಹೇಳಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ನವೀದ್ ಬಾಬು ಒಳಗೊಂಡ ಭಯೋತ್ಪಾದಕ ಪ್ರಕರಣದಲ್ಲಿ ಸಂಬಂಧ ಹೊಂದಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬಂಧಿಸಿರುವ ವಹೀದ್ ಪರ್ರಾನನ್ನು ಬಂಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.