ದೇಶ

ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ನಾಲ್ವರು ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ನಾಲ್ವರು ಸಾವು, ಹಲವರಿಗೆ ಗಾಯ
ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂ
Published On :

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರದ ಕೇಂದ್ರ ಭಾಗದಲ್ಲಿರುವ ವ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.

"ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಬೆಂಕಿ ಆ ಮಹಡಿಗೆ ಸೀಮಿತವಾಗಿ ಉಳಿದಿದೆ ಮತ್ತು ಮತ್ತಷ್ಟು ಹರಡಲಿಲ್ಲ" ಎಂದು ನಾಗ್ಪುರ ಮಹಾನಗರ ಪಾಲಿಕೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ
ರಾಜೇಂದ್ರ ಉಚ್ಕೆ, ಹೇಳಿದ್ದಾರೆ. ಈ ಆಸ್ಪತ್ರೆ ಕೋವಿಡ್ ರೋಗಿಗಳು ದಾಖಲಾಗದ ಇತರೆ ಆಸ್ಪತ್ರೆಯಾಗಿದೆ.

ಹಲವಾರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಲಾಗಿದೆ.

"ಬೆಂಕಿ ಕಾಣಿಸಿಕೊಂಡಾಗ ಎರಡನೇ ಮಹಡಿಯಲ್ಲಿ 10 ರೋಗಿಗಳು ಇದ್ದರು. ಆರು ರೋಗಿಗಳು ತಾವೇ ಹೊರಗೋಡಿ ಬಂದಿದ್ದರೆ ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.