ದೇಶ

ಪಶ್ಚಿಮ ಬಂಗಾಳ: ನಾಳೆ 44 ಕ್ಷೇತ್ರಗಳಲ್ಲಿ ನಾಲ್ಕನೇ ಹಂತದ ಮತದಾನ

ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ನಾಳೆ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ ಚಟರ್ಜಿ, ಅನೂಪ್ ಬಿಸ್ವಾಸ್ ಸೇರಿದಂತೆ ಹಲವು ಮುಖಂಡರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಪಶ್ಚಿಮ ಬಂಗಾಳ: ನಾಳೆ 44 ಕ್ಷೇತ್ರಗಳಲ್ಲಿ ನಾಲ್ಕನೇ ಹಂತದ ಮತದಾನ
ಮಮತಾ ಬ್ಯಾನರ್ಜಿ, ಅಮಿತ್ ಶಾ
Published On :

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ನಾಳೆ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ ಚಟರ್ಜಿ, ಅನೂಪ್ ಬಿಸ್ವಾಸ್ ಸೇರಿದಂತೆ ಹಲವು ಮುಖಂಡರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಕೋಚ್ ಬೆಹಾರ್, ಅಲಿಪುರ್ದಾರ್ , ಹೌರಾ, ಹೂಗ್ಲಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ 44 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. 15, 940 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದ್ದು, ಅರೆಸೇನಾ ಪಡೆಯ 789 ತುಕಡಿಗಳನ್ನು ನಿಯೋಜಿಸಲಾಗಿದೆ. ಕೋಚ್ ಬೆಹಾರ್ ನಲ್ಲಿ ಅತಿ ಹೆಚ್ಚು 187 ಅರೆಸೇನಾ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ. 

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6-30ಕ್ಕೆ ಮುಕ್ತಾಯಗೊಳ್ಳಲಿದೆ. ಇವಿಎಂ ಮತ್ತಿತರ ಚುನಾವಣೆ ಸಲಕರಣೆ ವಿತರಣೆ ಪ್ರಕ್ರಿಯೆ ಆರಂಭವಾಗಿದೆ. ಸುಮಾರು ಏಳು ಸಾವಿರ ಮತಗಟ್ಟೆ ಸಿಬ್ಬಂದಿಯನ್ನು ಜಿಲ್ಲಾಡಳಿತದಿಂದ  ನೇಮಕ ಮಾಡಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.