ದೇಶ

ಕೋವಿಡ್-19: ದೇಶದಲ್ಲಿಂದು 1.31 ಲಕ್ಷ ಕೇಸ್ ಪತ್ತೆ, 780 ಮಂದಿ ಸಾವು

ದೇಶದಲ್ಲಿ ಶುಕ್ರವಾರ 1,31,968 ಹೊಸ ಕೊರೋನಾ ಕೇಸ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.

ಕೋವಿಡ್-19: ದೇಶದಲ್ಲಿಂದು 1.31 ಲಕ್ಷ ಕೇಸ್ ಪತ್ತೆ, 780 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಶುಕ್ರವಾರ 1,31,968 ಹೊಸ ಕೊರೋನಾ ಕೇಸ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ. 

ಇನ್ನು ಒಂದೇ ದಿನ ಬರೋಬ್ಬರಿ 780 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,67,642ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಸತತ 30 ದಿನಗಳಿಂದ ಕೊರೋನಾ ಪ್ರಕರಣಗುಳು ಏರಿಕೆಯಾಗುತ್ತಿವೆ. ಕಳೆದ ಫೆ.15ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 1.35 ಲಕ್ಷಕ್ಕೆ ಕುಸಿದಿತ್ತು. ಈ ಮೂಲಕ ಕೊರೋನಾ ನಿಯಂತ್ರಣದ ಆಶಾಭಾವನೆ ಮೂಡಿತ್ತು. ಆದರೆ, 53 ದಿನದ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸುಮಾರು 8 ಲಕ್ಷದಷ್ಟು ಹೆಚ್ಚಿದ್ದು, 9,79,608ಕ್ಕೆ ತಲುಪಿದೆ. 

ಒಂದೇ ದಿನ 1,31,968 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,30,60,542ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 61,899 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,19,13,292ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 13,64,205 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,40,41,584 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 9,43,34,262 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.