ದೇಶ

ತಮ್ಮದೇ ಪಕ್ಷದ ನಾಯಕರಿಗಿಂತ ನನ್ನ ಮಾತುಗಳ ಮೇಲೆ ಬಿಜೆಪಿಗೆ ನಂಬಿಕೆ: ಆಡಿಯೋ ಕ್ಲಿಪ್ ಬಗ್ಗೆ ಪ್ರಶಾಂತ್ ಕಿಶೋರ್ ತಿರುಗೇಟು!

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುರಿತು, ಚುನಾವಣಾ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಹೇಳಿದ್ದಾರೆ ಎನ್ನಲಾದ ಆಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳ್ವಿಯಾ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮದೇ ಪಕ್ಷದ ನಾಯಕರಿಗಿಂತ ನನ್ನ ಮಾತುಗಳ ಮೇಲೆ ಬಿಜೆಪಿಗೆ ನಂಬಿಕೆ: ಆಡಿಯೋ ಕ್ಲಿಪ್ ಬಗ್ಗೆ ಪ್ರಶಾಂತ್ ಕಿಶೋರ್ ತಿರುಗೇಟು!
ಪ್ರಶಾಂತ್ ಕಿಶೋರ್
Published On :

ಕೊಲ್ಕೋತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುರಿತು, ಚುನಾವಣಾ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಹೇಳಿದ್ದಾರೆ ಎನ್ನಲಾದ ಆಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳ್ವಿಯಾ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರಷ್ಟೇ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಕೂಡ ಹೊಂದಿದ್ದಾರೆ ಎಂದು, ಪತ್ರಕರ್ತರ ಬಳಗ ಕ್ಲಬ್‌ಹೌಸ್ ಚಾಟ್‌ನ ಸಂವಾದದಲ್ಲಿ ಪ್ರಶಾಂತ್ ಕಿಶೋರ್ ಹೇಳಿದ್ದಾರೆ ಎನ್ನಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕುರಿತು ಕ್ಲಬ್‌ಹೌಸ್ ಚಾಟ್‌ನಲ್ಲಿ ನಡೆಯುತ್ತಿದ್ದ ಆಡಿಯೋ ಸಂವಾದದಲ್ಲಿ, ಜನಪ್ರಿಯತೆಯ ಮಾನದಂಡದಲ್ಲಿ ಪ್ರಧಾನಿ ಮೋದಿ ಹಾಗೂ ಮಮತಾ ಬ್ಯಾನರ್ಜಿ ಸರಿಸಮಾನರು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಈ ಆಡಿಯೋವನ್ನು ಬಿಡುಗಡೆ ಮಾಡಿರುವ ಅಮಿತ್ ಮಾಳ್ವಿಯಾ, ಮಮತಾ ಬ್ಯಾನರ್ಜಿ ಅವರ ಚುನಾವಣಾ ನೀತಿ ನಿರೂಪಕ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ ಎಂದು ಕುಹುಕವಾಡಿದ್ದಾರೆ.

ಇನ್ನು ಅಮಿತ್ ಮಾಲ್ವಿಯಾ ಬಿಡಗುಡೆ ಮಾಡಿರುವ ಆಡಿಯೋ ಚಾಟ್‌ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಶಾಂತ್ ಕಿಶೋರ್, ಬಿಜೆಪಿ ತಮ್ಮದೇ ನಾಯಕರ ಮಾತುಗಳಿಗಿಂತ ನನ್ನ ಮಾತುಗಳ ಮೇಲೆ ನಂಬಿಕೆ ಇಡುತ್ತದೆ ಎಂಬುದನ್ನು ತಿಳಿದು ಸಂತೋಷವಾಯಿತು ಎಂದು ತಿರುಗೇಟು ನೀಡಿದ್ದಾರೆ.

ಅಮಿತ್ ಮಾಳ್ವಿಯಾ ಅವರಿಗೆ ಧೈರ್ಯವಿದ್ದರೆ ಸಂಪೂರ್ಣ ಆಡಿಯೋ ಚಾಟ್‌ನ್ನು ಬಿಡುಗಡೆ ಮಾಡಬೇಕು ಎಂದು ಪ್ರಶಾಂತ್ ಕಿಶೋರ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.