ಕೊರೋನಾ ಆರ್ಭಟ: ಕಾಂಗ್ರೆಸ್ ಸಿಎಂಗಳ ಜೊತೆ ಸೋನಿಯಾ ವಿಡಿಯೋ ಸಂವಾದ
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯ ಪರಿಸ್ಥಿತಿ ಪರಿಶೀಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯ ಪರಿಸ್ಥಿತಿ ಪರಿಶೀಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದ್ದು, ರಾಜ್ಯಗಳಲ್ಲಿನ ಕೊರೊನಾ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿರುವ ಸೋನಿಯಾ ಅವರು ಟೆಸ್ಟ್, ಟ್ರ್ಯಾಕ್ ಮತ್ತು ಲಸಿಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ್ದಾರೆಂದು ವರದಿಗಲು ತಿಳಿಸಿವೆ.
ಸಭೆಯಲ್ಲಿ ಲಸಿಕೆ ಲಭ್ಯತೆ, ಔಷಧಿ ಹಾಗೂ ವೆಂಟಿಲೇಟರ್ ಗಳ ಲಭ್ಯತೆ ಕುರಿತು ಸೋನಿಯಾ ಗಾಂಧಿಯವರು ಮಾಹಿತಿ ಪಡೆದಿದ್ದಾರೆಂದು ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


