ಪಶ್ಚಿಮ ಬಂಗಾಳ ಚುನಾವಣೆ: ಸಿಟಾಲ್ಕುಚಿಯ ಮತಗಟ್ಟೆ ನಂ.126 ರಲ್ಲಿ ಮತದಾನ ಮುಂದೂಡಿಕೆಗೆ ಆದೇಶ
ಹಿಂಸಾಚಾರ ವರದಿಯಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಿಟಾಲ್ಕುಚಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ನಂ.126 ರಲ್ಲಿ ಮತದಾನ ಪ್ರಕ್ರಿಯೆಯನ್ನು ಮುಂದೂಡಲು ಚುನಾವಣಾ ಆಯೋಗ ಆದೇಶ ನೀಡಿದೆ.

ನವದೆಹಲಿ: ಹಿಂಸಾಚಾರ ವರದಿಯಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಿಟಾಲ್ಕುಚಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ನಂ.126 ರಲ್ಲಿ ಮತದಾನ ಪ್ರಕ್ರಿಯೆಯನ್ನು ಮುಂದೂಡಲು ಚುನಾವಣಾ ಆಯೋಗ ಆದೇಶ ನೀಡಿದೆ.
ವಿಶೇಷ ವೀಕ್ಷಕರ ಪ್ರಾಥಮಿಕ ವರದಿಯ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಅಧಿಕಾರಿಗಳಿಂದ ಘಟನೆ ಬಗ್ಗೆ ವಿಸ್ತೃತ ವರದಿಯನ್ನು ಕೇಳಲಾಗಿದ್ದು, ಸಂಜೆ 5 ಕ್ಕೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವರದಿಯನ್ನು ನೀಡಲಿದ್ದಾರೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದರು. ಈ ಬೆನ್ನಲ್ಲೇ ಆಯೋಗ ಮತದಾನವನ್ನು ಮುಂದೂಡುವ ನಿರ್ಧಾರ ಪ್ರಕಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


