ಲಸಿಕೆ ಉತ್ಸವ ಯಶಸ್ವಿಗೊಳಿಸಲು ಪ್ರಧಾನಿ ಮನವಿ
ದೇಶದಲ್ಲಿ ಇಂದಿನಿಂದ ಇದೇ 14 ರವರೆಗೆ ಲಸಿಕೆ ಉತ್ಸವ ನಡೆಯಲಿದ್ದು ಇದನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ.

ನವದೆಹಲಿ: ದೇಶದಲ್ಲಿ ಇಂದಿನಿಂದ ಏ.14 ರವರೆಗೆ ಲಸಿಕೆ ಉತ್ಸವ ನಡೆಯಲಿದ್ದು ಇದನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಎಲ್ಲಾ ರಾಜ್ಯಗಳಲ್ಲಿ ಲಸಿಕೆ ನೀಡುವ ಅಭಿಯಾನವನ್ನು ತೀವ್ರಗೊಳಿಸಲು ಪ್ರಧಾನಿ ಮೋದಿ ಅವರು ಕರೆ ಕೊಟ್ಟಿದ್ದಾರೆ. ಸಾರ್ವಜನಿಕರು ಲಸಿಕೆ ಹಾಕಿಸಿಕೊಂಡು ಸೋಂಕನ್ನು ನಿಯಂತ್ರಿಸಲು ಮುಂದಾಗಬೇಕು ಎಂದು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನ ಮೋದಿ, ಇಂದಿನಿಂದ, ನಾವೆಲ್ಲರೂ ದೇಶಾದ್ಯಂತ ಲಸಿಕೆ ಉತ್ಸವವನ್ನು ಪ್ರಾರಂಭಿಸುತ್ತಿದ್ದೇವೆ. ಕೋವಿಡ್ ಲಸಿಕೆ ಪಡೆಯಲು ಸಹಾಯ ಮಾಡುವವರಿಗೆ ಸಹಾಯ ಮಾಡಿ, ಕೋವಿಡ್ ಲಸಿಕೆ ಪಡೆಯಲು ಜನರಿಗೆ ಸಹಾಯ ಮಾಡಿ, ಮಾಸ್ಕ್ ಧರಿಸಿ, ಇತರರು ಧರಿಸುವಂತೆ ಪ್ರೇರೇಪಿಸಿ ಎಂದು ಕೊರೊನಾ ವಿರುದ್ಧದ ಹೋರಾಟದ ಈ ಹಂತದಲ್ಲಿ, ದೇಶವಾಸಿಗಳು ವಿಷಯಗಳಿಗೆ ಬದ್ಧರಾಗಿ ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


