ಸ್ಪೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಸಚಿನ್ ವಾಜೆ ಸಹಚರ, ಪೊಲೀಸ್ ಅಧಿಕಾರಿ ರಿಯಾಜ್ ಬಂಧಿಸಿದ ಎನ್ಐಎ
ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್ ಅಧಿಕಾರಿ ರಿಯಾಜ್ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಭಾನುವಾರ ಬಂಧನಕ್ಕೊಳಪಡಿಸಿದೆ.

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್ ಅಧಿಕಾರಿ ರಿಯಾಜ್ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಭಾನುವಾರ ಬಂಧನಕ್ಕೊಳಪಡಿಸಿದೆ.
ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ರಿಯಾಜ್ ಸಹಕಾರ ನೀಡಿದ್ದರು ಎಂದು ಎನ್ಐಎ ಹೇಳಿದೆ.
ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನ ಪತ್ತೆ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ಎನ್ಐಎ ಕಳೆದ ತಿಂಗಳು ಸಚಿನ್ ವಾಜೆ ಅವರನ್ನು ಬಂಧಿಸಿತ್ತು. .
ಸಚಿನ್ ವಾಜೆ ರೀತಿಯೇ ರಿಯಾಜ್ ಕೂಡ ಅಸಿಸ್ಟೆಂಟ್ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದಾರೆ. ಮಾರ್ಚ್ 5ರಂದು ಶವವಾಗಿ ಪತ್ತೆಯಾದ ಉದ್ಯಮಿ ಹಿರೇನ್ ಅವರ ಸ್ಕಾರ್ಪಿಯೊ ಕಾರನ್ನು ಸಚಿನ್ ವಾಜೆ ಬಾಂಬ್ ಬೆದರಿಕೆಗಾಗಿ ಬಳಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ಸ್ಫೋಟಕಗಳಿದ್ದ ಕಾರು ಫೆಬ್ರುವರಿ 25ರಂದು ಮುಕೇಶ್ ಅಂಬಾನಿ ನಿವಾಸ ಆಂಟಿಲಿಯಾ ಮುಂಭಾಗದಲ್ಲಿ ಪತ್ತೆಯಾಗಿತ್ತು. ಆ ಪ್ರಕರಣಗಳಲ್ಲಿ ಸಚಿನ್ರನ್ನು ಮಾರ್ಚ್ 13ರಂದು ಎನ್ಐಎ ಬಂಧಿಸಿತ್ತು.
ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಕಳೆದ ತಿಂಗಳು ಎರಡೂ ಪ್ರಕರಣಗಳನ್ನು ಎನ್ಐಎ ಮಹಾರಾಷ್ಟ್ರದ ಉಗ್ರ ನಿಗ್ರಹ ತಂಡದಿಂದ ತನಿಖೆಗೆ ಹಸ್ತಾಂತರಿಸಿಕೊಂಡಿತ್ತು. ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್, ಇಬ್ಬರು ಡೆಪ್ಯೂಟಿ ಕಮಿಷನರ್ಗಳು ಹಾಗೂ ಅಪರಾಧ ಗುಪ್ತಚರ ದಳ ಹತ್ತಾರು ಪೊಲೀಸರು ಸೇರಿದಂತೆ 40ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಈ ನಡುವೆ ಹಿರೇನ್ ಸಾವಿನ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


