ದೇಶ

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ

ದೇಶದಲ್ಲಿ ಕೊರೋನಾ ಮಹಾಮಾರಿ ಉಲ್ಭಣಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಸೋಂಕು ನಿರೋಧಕ ಔಷಧಿ ರೆಮ್ ಡೆಸಿವಿರ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ
ರೆಮ್ ಡೆಸಿವಿರ್
Published On :

ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿ ಉಲ್ಭಣಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಸೋಂಕು ನಿರೋಧಕ ಔಷಧಿ ರೆಮ್ ಡೆಸಿವಿರ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. 

ದೇಶದ ಕೋವಿಡ್ -19 ಪರಿಸ್ಥಿತಿ ಸುಧಾರಿಸುವವರೆಗೆ ಇಂಜೆಕ್ಷನ್ ರೆಮ್ಡೆಸಿವಿರ್ ಮತ್ತು ರೆಮ್ಡೆಸಿವಿರ್ ಆಕ್ಟಿವ್ ಫಾರ್ಮಾಸ್ಯುಟಿಕಲ್ ಪದಾರ್ಥಗಳು(ಎಪಿಐ) ರಫ್ತು ಮಾಡುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 

ಕೊರೋನಾ ವಿರುದ್ಧದ ಹೋರಾಟದಲ್ಲಿ ರೆಮ್ಡೆಸಿವಿರ್ ಅನ್ನು ಪ್ರಮುಖ ಆಂಟಿ-ವೈರಲ್ ಔಷಧವೆಂದು ಪರಿಗಣಿಸಲಾಗಿದೆ. ಇದಲ್ಲದೆ, ಆಸ್ಪತ್ರೆಗಳು ಮತ್ತು ರೋಗಿಗಳನ್ನು ರೆಮ್‌ಡೆಸಿವಿರ್‌ಗೆ ಸುಲಭವಾಗಿ ಸಿಗುವಂತೆ ಸರ್ಕಾರ ಮೂರು ಕ್ರಮಗಳನ್ನು ಕೈಗೊಂಡಿದೆ.

'ಭಾರತವು ಇತ್ತೀಚೆಗೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್ 11ರವರೆಗೂ ದೇಶದಲ್ಲಿ 11.08 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಅವು ಸ್ಥಿರವಾಗಿ ಹೆಚ್ಚುತ್ತಿವೆ. ಇದರಿಂದಾಗಿ ಇಂಜೆಕ್ಷನ್ ರೆಮ್‌ಡೆಸಿವಿರ್‌ನ ಬೇಡಿಕೆಯಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಈ ಬೇಡಿಕೆಯನ್ನು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.