ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 63,294 ಪ್ರಕರಣ ದಾಖಲು
ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಸೋಂಕಿನಿಂದ ಇಂದು 349 ರೋಗಿಗಳು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 57,987ಕ್ಕೆ ಏರಿಕೆಯಾಗಿದೆ. ಒಟ್ಟು 34,008 ರೋಗಿಗಳು ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗುವುದರೊಂದಿಗೆ ಗುಣಮುಖರಾದವರ ಸಂಖ್ಯೆ 27,82,161ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ರಾಜ್ಯದಾದ್ಯಂತ ಭಾನುವಾರ 2,63,137 ಪರೀಕ್ಷೆಗಳನ್ನು ನಡೆಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿ 5,65,587 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ 31,75,585 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದು, 25, 694 ಜನರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದಾರೆ.
ಮುಂಬೈನಲ್ಲಿ 9, 986 ಪ್ರಕರಣಗಳು, 79 ಸಾವು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟಾರೇ ಪ್ರಕರಣಗಳ ಸಂಖ್ಯೆ 5,20,498ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 12,023 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


