ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾ
ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಕೇಂದ್ರ ಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಕೂಚ್ ಬೆಹಾರ್ ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದರು ಎಂದು ಅಮಿತ್ ಶಾ ಹೇಳಿದ್ದಾರೆ.
ಏ.10 ರಂದು ಕೂಚ್ ಬೆಹಾರ್ ನಲ್ಲಿ ಮತದಾನದ ವೇಳೆಯೇ ಹಿಂಸಾಚಾರ ಉಂಟಾಗಿತ್ತು. ಕೇಂದ್ರ ಪಡೆಗಳು ಮತಗಟ್ಟೆಯ ಬಳಿ ಎರಡು ಬಾರಿ ಗುಂಡು ಹಾರಿಸಿದ್ದರು. ಈ ವೇಳೆ ಜನತೆ ತಮ್ಮ ಮತ ಚಲಾಯಿಸುತ್ತಿದ್ದರು, ಕೇಂದ್ರಪಡೆಗಳು ಗುಂಡು ಹಾರಿಸಿದ ಪರಿಣಾಮ ಪಕ್ಷದ ನಾಲ್ವರು ಕಾರ್ಯಕರ್ತರು ಸಾವನ್ನಪ್ಪಿದರು ಎಂದು ಟಿಎಂಸಿ ಆರೋಪಿಸಿದೆ.
ಆದರೆ ಚುನಾವಣಾ ಆಯೋಗ ಕೇಂದ್ರ ಪಡೆಗಳು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿವೆ ಎಂದು ಆಯೋಗ ಕೇಂದ್ರ ಪಡೆಗಳಿಗೆ ಕ್ಲೀನ್ ಚಿಟ್ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


