ದೇಶ

ಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ

ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

ಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ
ಮಮತಾ ಬ್ಯಾನರ್ಜಿ
Published On :

ಕೊಲ್ಕತ್ತಾ: ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

ಏಪ್ರಿಲ್ 12ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 13ರ ರಾತ್ರಿ 8 ಗಂಟೆಯವರೆಗೆ ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರಚಾರಕ್ಕೆ  ನಿರ್ಬಂಧ ವಿಧಿಸಿ ಆಯೋಗ ಆದೇಶ ಹೊರಡಿಸಿದೆ. 

ಚುನಾವಣಾ ಆಯೋಗದಿಂದ ಈ ಆದೇಶ ಹೊರಬೀಳುತ್ತಿದ್ದಂತೆ, ಚುನಾವಣಾ ಸಮಿತಿ ಬಿಜೆಪಿಯ ಘಟಕದಂತೆ ವರ್ತಿಸುತ್ತಿದಂತೆ ಎಂದು ಟಿಎಂಸಿ ಆರೋಪಿಸಿದೆ. ದೇಶದ ಪ್ರಜಾಪ್ರಭುತ್ವಕ್ಕೆ ಇದು ಕಪ್ಪು ದಿನವಾಗಿದೆ ಎಂದು ರಾಜ್ಯಸಭಾ ಸದಸ್ಯ ಡೆರೆಕ್ ಓ ಬ್ರಿಯಾನ್ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಚುನಾವಣಾ ಆಯೋಗದ ಈ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಮಮತಾ ಬ್ಯಾನರ್ಜಿ, ಆಯೋಗದ ನಿರ್ಣಯ ಪ್ರಜಾಪ್ರಭುತ್ವ ವಿರೋಧಿ, ಅಸಂವಿಧಾನಿಕವಾಗಿದೆ. ಆಯೋಗದ ನಿರ್ಧಾರ ಖಂಡಿಸಿ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ  ಕೋಲ್ಕತ್ತಾದ ಗಾಂಧಿ ಪ್ರತಿಮೆ ಬಳಿ ಧರಣಿ ಕೂರುವುದಾಗಿ ಟ್ಪಿಟರ್ ನಲ್ಲಿ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಮತದಾನ ಆರಂಭವಾಗಿದ್ದು, ಎಂಟು ಹಂತಗಳ ಮತದಾನದ ಪೈಕಿ ಈಗಾಗಲೇ ನಾಲ್ಕು ಹಂತಗಳು ಮುಕ್ತಾಯಗೊಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.