ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ನೇಮಕ
ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ತಿಳಿಸಿದೆ.
ಸುಶೀಲ್ ಚಂದ್ರ ಅವರು ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಶಾಸನಾತ್ಮಕ ಇಲಾಖೆಯಿಂದ ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರ ಅಧಿಕಾರವಧಿ ಸೋಮವಾರ ಅಂತ್ಯಗೊಂಡಿತು. ತೆರವಾಗಲಿರುವ ಈ ಸ್ಥಾನಕ್ಕೆ ಸುಶೀಲ್ ಚಂದ್ರ ಅವರನ್ನು ನೇಮಿಸಲಾಗಿದೆ.
ಮುಖ್ಯ ಚುನಾವಣಾ ಆಯುಕ್ತರಾಗಿ ಇವರ ಅಧಿಕಾರವಧಿ ಮೇ 14, 2022ರವರೆಗೂ ಇರಲಿದೆ. ಸುಶೀಲ್ ಚಂದ್ರ ಅವರ ನೇತೃತ್ವದಲ್ಲಿ ಆಯೋಗ ಗೋವಾ, ಮಣಿಪುರ, ಉತ್ತರಾಖಂಡ, ಪಂಜಾಬ್ ರಾಜ್ಯಗಳ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


