ಲಕ್ಷದ್ವೀಪ ಮತ್ತು ಜಮ್ಮು ಕಾಶ್ಮೀರದ ಬುಡ್ಗಾಮ್ ಜಿಲ್ಲೆ ಕ್ಷಯರೋಗ ಮುಕ್ತ: ಕೇಂದ್ರ ಘೋಷಣೆ
ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
"ನಾವು ಈಗ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಘೋಷಿಸಿದ್ದೇವೆ. ಇದು ಒಂದು ಹೆಗ್ಗುರುತಾಗಿದ್ದು 2025 ರ ವೇಳೆಗೆ ಭಾರತ ಟಿಬಿ ಮುಕ್ತವಾಗಲು ಇದು ನಾಂದಿಯಾಗಲಿದೆ." ಅವರು ಹೇಳಿದ್ದಾರೆ.
ವಿಶ್ವ ಟಿಬಿ ದಿನದಂದು ಅಂಬೇಡ್ಕರ್ ರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿದ್ದ ಸಚಿವರು ಮಾತನಾಡಿದ್ದಾರೆ.
ಪೋಲಿಯೊ ವಿರುದ್ಧದ ಹೋರಾಟವನ್ನು ನೆನಪಿಸಿಕೊಂಡ ಸಚಿವರು 2009 ರ ಹೊತ್ತಿಗೆ ಭಾರತವು ಜಾಗತಿಕ ಪೋಲಿಯೊ ಪ್ರಕರಣಗಳಲ್ಲಿ 60 ಪ್ರತಿಶತಕ್ಕಿಂತ ಹೆಚ್ಚಿನದನ್ನು ಹೊಂದಿದ್ದೂ ನಾವು ದೇಶದಿಂದ ಪೋಲಿಯೊವನ್ನು ಅಳಿಸಿಹಾಕುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. ಭಾರತದ ಅಪಾರ ಜನಸಂಖ್ಯೆಯ ಕಾರಣದಿಂದಾಗಿ ಇದು ಒಂದು ದೊಡ್ಡ ಸವಾಲಾಗಿತ್ತು ಎಂದರು. "ಕೋವಿಡ್ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಒಟ್ಟಾಗಿ ಏನನ್ನು ಸಾಧಿಸಬಹುದು ಎಂಬುದನ್ನು ನಾವು ಮತ್ತೆ ಜಗತ್ತಿಗೆ ತೋರಿಸಿದ್ದೇವೆ." ಸಚಿವರು ಹೇ್ಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


