ಅನುಮತಿ ಇಲ್ಲದೆ ಅಮೆರಿಕ ನೌಕಾಪಡೆ 'ಕಾರ್ಯಾಚರಣೆ' ಭಾರತಕ್ಕೆ ತೋರಿದ ಅಗೌರವ: ಶಶಿ ತರೂರ್
ಅಮೆರಿಕ ನೌಕಾಪಡೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆಇಇಝೆಡ್ ಒಳಗೆ ‘ನ್ಯಾವಿಗೇಷನ್ ಆಪರೇಷನ್(ಸ್ವತಂತ್ರ ಕಾರ್ಯಾಚರಣೆ)’ ನಡೆಸಿದ್ದು ಕಾನೂನು ಉಲ್ಲಂಘನೆಯಾಗುವುದಿಲ್ಲ ಆದರೆ ಅಗೌರವವಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ.

ನವದೆಹಲಿ: ಅಮೆರಿಕ ನೌಕಾಪಡೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆ ಭಾರತೀಯ ವಿಶೇಷ ಆರ್ಥಿಕ ವಲಯ (ಇಇಝೆಡ್)ದ ಒಳಗೆ ‘ನ್ಯಾವಿಗೇಷನ್ ಆಪರೇಷನ್(ಸ್ವತಂತ್ರ ಕಾರ್ಯಾಚರಣೆ)’ ನಡೆಸಿದ್ದು ಕಾನೂನು ಉಲ್ಲಂಘನೆಯಾಗುವುದಿಲ್ಲ ಆದರೆ ಅಗೌರವವಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ಅಧೀನ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಅಮೆರಿಕದ ನಡೆ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುವುದಿಲ್ಲ. ಅದು ಭಾರತಕ್ಕೆ ತೋರಿದ ಅಗೌರವವಾಗುತ್ತದೆ ಸಮುದ್ರಕ್ಕೆ ಸಂಬಂಧಿಸಿದ ಕಾನೂನಿನಲ್ಲಿ, ಇಇಝೆಡ್ ನಲ್ಲಿ ಅಮೆರಿಕ ನೌಕೆ ಕಾರ್ಯಾಚರಣೆ ನಡೆಸಿದ್ದನ್ನು ವಿರೋಧಿಸುವ ಭಾರತದ ವಾದಕ್ಕೆ ಬೆಂಬಲ ದೊರೆಯುವಂತಹ ಅಂಶಗಳಿಲ್ಲ,
ಅಮೆರಿಕನ್ನರು ದಕ್ಷಿಣ ಚೀನಾ ಸಮುದ್ರದಲ್ಲಿ ಫ್ರೀಡಂ ಆಫ್ ನ್ಯಾವಿಗೇಶನ್ ಅಡಿಯಲ್ಲಿ ಏನನ್ನು ಮಾಡಲು ಯತ್ನಿಸುತ್ತಿದೆಯೋ ಅದನ್ನೇ ಭಾರತದ ಲಕ್ಷದ್ವೀಪದಲ್ಲೂ ಮಾಡಲು ಯತ್ನಿಸಿದ್ದಾರೋ ಅದನ್ನೇ ಮಾಡುತ್ತಿದ್ದಾರೆ.
ಭಾರತ ಈ ಸಮಸ್ಯೆಗೆ ರಾಜತಾಂತ್ರಿಕವಾಗಿಯೇ ಪರಿಹಾರ ಕಂಡುಕೊಳ್ಳಬೇಕು ಎಂದು ಟ್ವೀಟ್ ಮಾಡಿರುವ ಶಶಿ ತರೂರ್ ಇದಕ್ಕಾಗಿ ಸಲಹೆಯನ್ನೂ ನೀಡಿದ್ದಾರೆ.
ಈ ರೀತಿಯ ಕಾರ್ಯಾಚರಣೆಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಪಡೆಯುವುದಾಗಿ ಅಮೆರಿಕಾದಿಂದ ಸ್ಪಷ್ಟ ಪತ್ರವನ್ನು ಪಡೆಯಬೇಕು, ನಮ್ಮನ್ನು ಅವರು ಲೆಕ್ಕಿಸುವುದಿಲ್ಲ ಎಂಬ ಸಂದೇಶ ಹೋಗದಂತೆ ಎಚ್ಚರ ವಹಿಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


