ವಲಸಿಗರಿಗೆ ಉಚಿತ ಊಟ, ವಸತಿ ಒದಗಿಸಿ: ಸರ್ಕಾರಕ್ಕೆ ಮಾಯಾವತಿ ಆಗ್ರಹ
ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಲಕ್ನೋ: ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಉಚಿತ ಲಸಿಕೆ ನೀಡುವಂತೆಯೂ ಅವರು ಆಗ್ರಹಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮತ್ತೆ ಸರ್ಕಾರ ಲಾಕ್ ಡೌನ್ ಘೋಷಿಸುವ ಭಯದಲ್ಲಿ ವಲಸಿಗರು ತಮ್ಮ ಊರುಗಳಿಗೆ ತೆರಳಲು ಯೋಜಿಸುತ್ತಿದ್ದಾರೆ.
ರಾಜ್ಯ ಸರ್ಕಾರಗಳು ಆಹಾರ ಮತ್ತು ವಸತಿಗಾಗಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು, ವಲಸಿಗರಿಂದ ಕೊರೋನಾ ಮತ್ತಷ್ಟು ಹರಡುವುದನ್ನು ತಪ್ಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೂ ಸಹಾಯ ಮಾಡಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


