ಕೋವಿಡ್-19: ಮಹಾರಾಷ್ಟ್ರದಲ್ಲಿ 61,695 ಹೊಸ ಪ್ರಕರಣ, 349 ಸಾವು
ಮಹಾರಾಷ್ಟ್ರದಲ್ಲಿ ಗುರುವಾರ 61,695 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 36,39,855 ಕ್ಕೆ ಏರಿಕೆಯಾಗಿದೆ. 349 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತಪಟ್ಟವರ ಸಂಖ್ಯೆ 59,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ 61,695 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 36,39,855 ಕ್ಕೆ ಏರಿಕೆಯಾಗಿದೆ. 349 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತಪಟ್ಟವರ ಸಂಖ್ಯೆ 59,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
53,335 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಚೇತರಿಕೆಯಾದವರ ಒಟ್ಟು ಸಂಖ್ಯೆ 29,59,056 ಆಗಿದೆ. ಮಹಾರಾಷ್ಟ್ರದಲ್ಲಿ ಸದಸ್ಯ 6,20,060 ಸಕ್ರಿಯ ಪ್ರಕರಣಗಳಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.
ಮುಂಬೈಯಲ್ಲಿ 8,209 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,53,404 ಆಗಿದೆ. 50 ಮಂದಿ ಸಾವಿನೊಂದಿಗೆ ಮೃತರ ಒಟ್ಟು ಸಂಖ್ಯೆ 12,197ಕ್ಕೆ ಏರಿಕೆಯಾಗಿದೆ. 2,34,452 ಹೊಸ ಪರೀಕ್ಷೆಯೊಂದಿಗೆ ಈವರೆಗೂ 2, 30,35,652 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರಸ್ತುತ 35, 87,478 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದರೆ, 27,273 ಜನರು ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಯಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿನ ಪ್ರಸ್ತುತ ಕೋವಿಡ್-19 ಚೇತರಿಕೆ ಪ್ರಮಾಣ ಶೇ.81.3 ರಷ್ಟಿದೆ. ಮರಣ ಪ್ರಮಾಣ ಶೇ. 1.63 ರಷ್ಟಿದೆ ಎಂದು ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


