ಕೋವಿಡ್-19 ಏರಿಕೆ: ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕರೆ
ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.
ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು
"ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆಯಲ್ಲಿ ಆಮ್ಲಜನಕ ಪೂರೈಕೆ ಸಾಧನ ಪ್ರಮುಖ ಪಾತ್ರ ವಹಿಸಲಿವೆ. ಈ ಕಾರಣದಿಂದಾಗಿ ಉತ್ಪಾದನೆ ಹೆಚ್ಚಿಸುವಂತೆ ಪ್ರಧಾನಿಗಳು ಕರೆ ನೀಡಿದ್ದಾರೆ ಎಂದು ಪಿಎಂಒ ತಿಳಿಸಿದೆ.
ಸಮಗ್ರ ಪರಿಶೀಲನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ, ಸ್ಟೀಲ್, ರಸ್ತೆ ಸಾರಿಗೆ ಕೈಗಾರಿಕಾ, ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


