ದೇಶ

ಐಸಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಐಸಿಎಸ್ ಇ ಅಥವಾ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಪರಿಷತ್ತು 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ.

ಐಸಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಐಸಿಎಸ್ ಇ ಅಥವಾ ಭಾರತೀಯ 
ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಪರಿಷತ್ತು 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ.

ಕೊರೋನಾ ವೈರಸ್ ಪ್ರಕರಣಗಳು ರಾಷ್ಟ್ರವ್ಯಾಪಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ, ಮೇ 4 ರಿಂದ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಗಳ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಗೆರ್ರಿ ಅರಾಥೂನ್ ಹೇಳಿದ್ದಾರೆ.

ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಮತ್ತು ಜೂನ್ ಮೊದಲ ವಾರದಲ್ಲಿ ಪರಿಶೀಲನೆ ನಡೆಸಿ, ಪರೀಕ್ಷೆ ನಡೆಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

12 ನೇ ತರಗತಿ ಪರೀಕ್ಷೆಗಳನ್ನು ನಂತರದ ಹಂತದಲ್ಲಿ ನಡೆಸಲಾಗುವುದು, 10 ನೇ ತರಗತಿಯ ವಿದ್ಯಾರ್ಥಿಗಳು ತದನಂತರ ಆಫ್‌ಲೈನ್ ಪರೀಕ್ಷೆಗಳಲ್ಲಿ ಹಾಜರಾಗಲು ಅಥವಾ ಮಂಡಳಿಯಿಂದ ಅಭಿವೃದ್ಧಿಪಡಿಸಿದ ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಪಡೆಯುವ ಆಯ್ಕೆಯನ್ನು ಪಡೆಯುತ್ತಾರೆ" ಎಂದು ಅರಾಥೂನ್ ಹೇಳಿದರು.

ಈ ವಾರದ ಆರಂಭದಲ್ಲಿ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ತನ್ನ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. ಹಲವಾರು ರಾಜ್ಯ ಮಂಡಳಿಗಳು ಕೂಡಾ  ಪರೀಕ್ಷೆಗಳನ್ನು ಮುಂದೂಡಿವೆ ಅಥವಾ ರದ್ದುಗೊಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.