ದೆಹಲಿಯಲ್ಲಿ ಕೋವಿಡ್ ನಿರ್ವಹಣೆಯ ನೋಡಲ್ ಸಚಿವರಾಗಿ ಡಿಸಿಎಂ ಮನೀಶ್ ಸಿಸೋಡಿಯಾ ನೇಮಕ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ನಿರ್ವಹಣೆಯ ನೋಡಲ್ ಸಚಿವರಾಗಿ ನೇಮಕಗೊಂಡಿದ್ದಾರೆ.

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ನಿರ್ವಹಣೆಯ ನೋಡಲ್ ಸಚಿವರಾಗಿ ನೇಮಕಗೊಂಡಿದ್ದಾರೆ.
ಮುಂದಿನ ಆದೇಶದ ವರೆಗೂ ಮನೀಶ್ ಸಿಸೋಡಿಯಾ ಅವರು ಅಂತರ-ಸಚಿವಾಲಯ ಸಮನ್ವಯದ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಮತ್ತು ಪಾಸಿಟಿವ್ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿನ್ನೆಯಷ್ಟೇ ವಾರಾಂತ್ಯ ಕರ್ಫ್ಯೂ ಘೋಷಿಸಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಮಾಲ್, ಜಿಮ್ನಾಷಿಯಂ ಮತ್ತು ಸಭಾಂಗಣಗಳನ್ನು ಏಪ್ರಿಲ್ 30 ರವರೆಗೆ ಬಂದ್ ಮಾಡಲಾಗಿದೆ.
ದೆಹಲಿಯಲ್ಲಿ ಗುರುವಾರ 16,699 ಪಾಸಿಟಿವ್ ಪ್ರಕರಣಗಳು ಮತ್ತು 112 ಸಾವು ದಾಖಲಾಗಿವೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


