ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ವಿಧಿವಶ
ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ (68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ (68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.
ಕೋವಿಡ್–19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ರಂಜಿತ್ ಸಿನ್ಹಾ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.
1974ನೇ ಬ್ಯಾಚ್ ಬಿಹಾರ ಕೇಡರ್‌ನ ಐಪಿಎಸ್ ಅಧಿಕಾರಿ (ನಿವೃತ್ತ) ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 4:30ಕ್ಕೆ ಸಿನ್ಹಾ ನಿಧನರಾದರು.
2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗುವುದಕ್ಕೂ ಮುನ್ನ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


