ದೇಶ

ಕೋವಿಡ್-19: ದೇಶದಲ್ಲಿಂದು 2,17,353 ಹೊಸ ಕೇಸ್ ಪತ್ತೆ, 1,185 ಮಂದಿ ಸಾವು

ಭಾರತದಲ್ಲಿ ಕೊರೋನಾ ಎರಡನೇ ಅಲೆ ಭಯಾನಕವಾಗಿ ಬೀಸುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 2,17,353 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿಂದು 2,17,353 ಹೊಸ ಕೇಸ್ ಪತ್ತೆ, 1,185 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ಎರಡನೇ ಅಲೆ ಭಯಾನಕವಾಗಿ ಬೀಸುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 2,17,353 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಒಂದೇ ದಿನ 2,17,353 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 1,185 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,74,308ಕ್ಕೆ ತಲುಪಿದೆ. ಈ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ 15,69,743ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,18,302 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,25,47,866ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 14,73,210 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 26,34,76,625 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 11,72,23,509 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.