ಕೋವಿಡ್-19: ಕೇಂದ್ರ ಸರ್ಕಾರದ ಕಾರ್ಯತಂತ್ರ ಕುರಿತು ರಾಹುಲ್ ಗಾಂಧಿ ಟೀಕೆ
ಕೋವಿಡ್–19 ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಅವರು ಶುಕ್ರವಾರ ಟೀಕಿಸಿದ್ದಾರೆ.

ನವದೆಹಲಿ: ಕೋವಿಡ್–19 ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಅವರು ಶುಕ್ರವಾರ ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ಮನಬಂದಂತೆ ಲಾಕ್‌ಡೌನ್ ಹೇರುವುದು, ಗಂಟೆ ಬಾರಿಸುವುದು ಮತ್ತು ದೇವರನ್ನು ಪ್ರಾರ್ಥಿಸಿ ಹಾಡುವುದು’ ಸರ್ಕಾರದ ಕಾರ್ಯತಂತ್ರಗಳಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.
ಕೋವಿಡ್–19 ನಿಯಂತ್ರಣ ಮತ್ತು ಲಸಿಕೆ ಅಭಿಯಾನದ ಕುರಿತು ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಯೋಜನೆಗಳನ್ನು ಈ ಹಿಂದೆಯೂ ಕಾಂಗ್ರೆಸ್ ಟೀಕಿಸಿತ್ತು. ಈ ಹಿಂದೆ ಕಾಂಗ್ರೆಸ್ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಮುಹಮ್ಮದ್ ಬಿನ್ ತುಘಲಕ್ ಆಡಳಿತಕ್ಕೆ ಹೋಲಿಕೆ ಮಾಡಿತ್ತು.
ವೈಜ್ಞಾನಿಕವಾಗಿ ಮತ್ತು ಸಮಗ್ರವಾಗಿ ಯೋಜನೆ ರೂಪಿಸದೆ ಸರ್ಕಾರ ಮನಸ್ಸಿಗೆ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


