ಪಶ್ಚಿಮ ಬಂಗಾಳ: ಸಂಜೆ 7 ರಿಂದ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ರ‍್ಯಾಲಿ, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ
ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶುಕ್ರವಾರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಮಯ ಕಡಿತ ಸೇರಿದಂತೆ ರಾಜಕೀಯ ಪಕ್ಷಗಳ ಪ್ರಚಾರಕ್ಕೆ ನಿರ್ಬಂಧಗಳನ್ನು ಜಾರಿಗೊಳಿಸಿದೆ.

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶುಕ್ರವಾರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಮಯ ಕಡಿತ ಸೇರಿದಂತೆ ರಾಜಕೀಯ ಪಕ್ಷಗಳ ಪ್ರಚಾರಕ್ಕೆ ನಿರ್ಬಂಧಗಳನ್ನು ಜಾರಿಗೊಳಿಸಿದೆ.
ಚುನಾವಣಾ ಆಯೋಗದ ಆದೇಶದಂತೆ ಸಂಜೆ 7 ಗಂಟೆಯವರೆಗೂ ಮಾತ್ರ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಈ ಹಿಂದೆ ರಾತ್ರಿ 10 ಗಂಟೆಯವರೆಗೂ ಪ್ರಚಾರ ನಡೆಸಲು ಅವಕಾಶ ನೀಡಲಾಗಿತ್ತು. ಸಂಜೆ 7 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ರಾಜ್ಯದಲ್ಲಿ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ತಿಳಿಸಿದೆ.
ಎಂಟು ಹಂತಗಳ ಚುನಾವಣೆ ಪೈಕಿ ಉಳಿದಿರುವ ಮೂರು ಹಂತಗಳ ಚುನಾವಣೆಗಾಗಿ ಏಪ್ರಿಲ್ 22,26 ಮತ್ತು 29 ರಂದು ಚುನಾವಣೆ ನಡೆಯಲಿದ್ದು, ಮೌನ ಅವಧಿಯನ್ನು 48 ಗಂಟೆಯಿಂದ 72 ಗಂಟೆಗೆ ವಿಸ್ತರಿಸಲಾಗಿದೆ. ಸಾಮಾನ್ಯವಾಗಿ 48 ಗಂಟೆ ಇರುತ್ತಿದ್ದ ಈ ಅವಧಿಯಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಚುನಾವಣಾ ರ‍್ಯಾಲಿ, ಸಭೆಗಳನ್ನು ನಡೆಸುವಂತಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


