ದೇಶ

ಪ್ರಧಾನಿ ಮೋದಿ ಕೊರೋನಾ ನಿಯಂತ್ರಿಸುವ ಬದಲು ಚುನಾವಣಾ ರ್ಯಾಲಿಗಳಲ್ಲಿ ಬ್ಯುಸಿ: ಕಾಂಗ್ರೆಸ್ ಟೀಕೆ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ಹೆಚ್ಚುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸಲು "ದೆಹಲಿಯಲ್ಲಿ ಉಳಿಯುವ ಬದಲು" ಪಶ್ಚಿಮ ಬಂಗಾಳದ

ಪ್ರಧಾನಿ ಮೋದಿ ಕೊರೋನಾ ನಿಯಂತ್ರಿಸುವ ಬದಲು ಚುನಾವಣಾ ರ್ಯಾಲಿಗಳಲ್ಲಿ ಬ್ಯುಸಿ: ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ಹೆಚ್ಚುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸಲು "ದೆಹಲಿಯಲ್ಲಿ ಉಳಿಯುವ ಬದಲು" ಪಶ್ಚಿಮ ಬಂಗಾಳದ ಚುನಾವಣಾ ರ್ಯಾಲಿಗಳಲ್ಲಿ ಬ್ಯುಸಿಯಾಗಿರುವುದು "ಆಘಾತಕಾರಿ" ಎಂದು ಕಾಂಗ್ರೆಸ್ ಶನಿವಾರ ಟೀಕಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಚೇರಿಯಲ್ಲಿ ಕುಳಿತು ತಮ್ಮ ಕರ್ತವ್ಯ ನಿರ್ವಹಿಸಬೇಕು. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಹಕಾರದೊಂದಿಗೆ ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಕಾಂಗ್ರೆಸ್ ಹಿರಿಯ ವಕ್ತಾರ ಪಿ.ಚಿದಂಬರಂ ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ದೆಹಲಿಯಲ್ಲಿ ಕುಳಿತು ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವ ಬದಲು ಪಶ್ಚಿಮ ಬಂಗಾಳದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಆಘಾತಕಾರಿ ಎಂದು ಮಾಜಿ ಕೇಂದ್ರ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ದೆಹಲಿಯಲ್ಲಿ ಕುಳಿತು ಕೊರೋನಾ ವಿರುದ್ಧ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ನಾಯಕ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಪಶ್ಚಿಮ ಬಂಗಾಳದ ಜನರು ಇದನ್ನು ಗಮನಿಸಿ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಆಘಾತಕಾರಿ ಉತ್ತರವನ್ನು ನೀಡುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದು ಚಿದಂಬರಂ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.