ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!
ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.
ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಟ ದೀಪ್ ಸಿಧು ಬಂಧನವಾಗಿದೆ.
ಪ್ರತಿಭಟನೆ ವೇಳೆ ಪಾರಂಪರಿಕ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿದೆ ಎಂದು ಎಎಸ್ಐ ಎಫ್‌ಐಆರ್ ದಾಖಲಿಸಿದೆ.
ಈ ಮುನ್ನ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಮೆರವಣಿಗೆಯ ವೇಳೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 9 ರಂದು ಬಂಧಿಸಲ್ಪಟ್ಟಿದ್ದ ದೀಪ್ ಸಿಧುಗೆ ದೆಹಲಿಯ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


