ಗಣರಾಜ್ಯದಿನದ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧುಗೆ ಜಾಮೀನು
ಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

ನವದೆಹಲಿ: ಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.
ಕಳೆದ ವಿಚಾರಣೆಯ ವೇಳೆ, ಜನವರಿ 26ರಂದು ಕೆಂಪು ಕೋಟೆಗೆ ಹೋಗುವಂತೆ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ನಾನು ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ತಿಳಿಸಿದ್ದರು.
ಸಿಧು ಅವರು ಪ್ರತಿಭಟನೆಗಾಗಿ ಕರೆ ನೀಡಿದ್ದಕ್ಕೆ, ಜನಸಮೂಹವನ್ನು ಪ್ರತಿಭಟನೆಯಲ್ಲಿ ತೊಡಗುವಂತೆ ಮಾಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅವರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು. ಅಲ್ಲದೆ ಸಿಧು ಯಾವ ರೈತ ಮುಖಂಡ, ರೈತ ಸಂಘದ ಸದಸ್ಯರಲ್ಲ ಎಂದು ಅವರ ಪರ ವಕೀಲರು ಹೇಳಿದ್ದಾರೆ.
ಸಿಧು ಅವರು ಫೇಸ್ಬುಕ್ನಲ್ಲಿ ವೀಡಿಯೊ ಪೋಸ್ಟ್ ಮಾಡುವಲ್ಲಿ ತಪ್ಪು ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದು ಅಪರಾಧವಲ್ಲ ಎಂದು ವಾದಿಸಿದ ವಕೀಲ ಹೇಳಿದ್ದಾರೆ . "ನಾನು ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ, ಅದು ನನ್ನ ತಪ್ಪು. ಪ್ರತಿಯೊಂದು ತಪ್ಪೂ ಅಪರಾಧವಲ್ಲ. ನಾನು ವಿಡಿಯೋ ಪೋಸ್ಟ್ ಮಾಡಿದ ಕಾರಣ ಮಾಧ್ಯಮಗಳು ನನ್ನನ್ನು ಮುಖ್ಯ ಆರೋಪಿ ಎಂದು ಹೆಸರಿಸಿದೆ. ನನ್ನನ್ನು ಮುಖ್ಯ ಸಂಚುಕೋರನಾಗಿ ಮಾಧ್ಯಮಗಳು ಬಿಂಬಿಸಿದ್ದವು. ಅವು ಹಾಗೇಕೆ ಮಾಡಿದವೆಂದು ನನಗೆ ಅರಿವಿಲ್ಲ" ಏಪ್ರಿಲ್ 8 ರಂದು ಜಾಮೀನು ಅರ್ಜಿಯ ಸಂದರ್ಭದಲ್ಲಿ ಸಿಧು ತನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದರು.
ಗಣರಾಜ್ಯೋತ್ಸವದಂದು ನಡೆದ ಕೆಂಪು ಕೋಟೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಧು ಅವರನ್ನು ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ಕೋಶ ಬಂಧಿಸಿತ್ತು. ಜನಸಮೂಹವನ್ನು ಪ್ರಚೋದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೇಕಾದವರಾಗಿದ್ದಾರೆ.
ಪ್ರತಿಭಟನಾ ನಿರತ ರೈತರು ಜನವರಿ 26 ರಂದು ಟ್ರಾಕ್ಟರ್ ಮೆರವಣಿಗೆ ನಡೆಸಲು ಕರೆ ನೀಡಿದ್ದರು. ಅವರಿಗೆ ದೆಹಲಿ ಪೊಲೀಸರು ಅನುಮತಿಸಿದ ಮಾರ್ಗವನ್ನು ನೀಡಿದ್ದರು ಆದರೆ ಒಂದು ಬಣವು ಆ ಅನುಮತಿಸಿದ ಮಾರ್ಗಕ್ಕೆ ಬದಲು ಮೂಲ ಕಾರ್ಯಕ್ರಮದ ಭಾಗವಾಗಿರದ ಕೆಂಪು ಕೋಟೆಗೆ ನುಗ್ಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


