ದೇಶ

ಥಾಣೆಯಲ್ಲಿ ಪವರ್‌ಲೂಮ್ ಕಾರ್ಖಾನೆ ಗೋಡೆ ಕುಸಿತ: ಮೂವರು ಕಾರ್ಮಿಕರು ಜೀವಂತ ಸಮಾಧಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್‌ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಥಾಣೆಯಲ್ಲಿ ಪವರ್‌ಲೂಮ್ ಕಾರ್ಖಾನೆ ಗೋಡೆ ಕುಸಿತ: ಮೂವರು ಕಾರ್ಮಿಕರು ಜೀವಂತ ಸಮಾಧಿ
ಸಾಂದರ್ಭಿಕ ಚಿತ್ರ
Published On :

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್‌ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಕಟೈ ಪ್ರದೇಶದ ತುಕಾರಾಂ ಕಾಂಪೌಂಡ್‌ನಲ್ಲಿ ಶುಕ್ರವಾರ ಸಂಜೆ ಈ ಅಪಘಾತ ಸಂಭವಿಸಿದೆ, ದುರಸ್ತಿ ಕಾರ್ಯದಲ್ಲಿದ್ದ ಪವರ್‌ಲೂಮ್ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದಿದೆ. ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಜೀವಂತ ಸಮಾಧಿ ಆಗಿದ್ದಾರೆ. 

ಇತರ ನಾಲ್ವರು ಗಾಯಗೊಂಡಿದ್ದು ಅವರುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್‌ಡಿಎಂಸಿ)ದ ಮುಖ್ಯಸ್ಥ ಸಂತೋಷ್ ಕದಮ್ ಶುಕ್ರವಾರ ತಡರಾತ್ರಿ ಬಿಡುಗಡೆಯಾಗಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕಾರ್ಮಿಕರನ್ನು ಮನ್ಸುಖ್ ಭಾಯ್ (45), ರಾಂಚೋಡ್ ಪ್ರಜಾಪತಿ (50) ಮತ್ತು ಭಗವಾನ್ ಜಾಧವ್ (55) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.