ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬನ್ನಿ: ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿ ಮನವಿ
ಇತ್ತೀಚಿನ ದಿನಗಳಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭಗಳನ್ನು ನಡೆಸುವ ಜನರ ಮಧ್ಯೆ ಇಲ್ಲೊಂದು ನವಜೋಡಿ ಇತರರಿಗೆ ಮಾದರಿಯಾಗಿದ್ದಾರೆ.

ಉತ್ತರಾಖಂಡ; ಇತ್ತೀಚಿನ ದಿನಗಳಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭಗಳನ್ನು ನಡೆಸುವ ಜನರ ಮಧ್ಯೆ ಇಲ್ಲೊಂದು ನವಜೋಡಿ ಇತರರಿಗೆ ಮಾದರಿಯಾಗಿದ್ದಾರೆ.
ಉತ್ತರಾಖಂಡದ ನವ ಜೋಡಿಯೊಂದು ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬರುವಂತೆ ಆಮಂತ್ರಣ ಪತ್ರಿಕೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿಯೇ ಸುರಕ್ಷತಾ ಕ್ರಮದ ಬಗ್ಗೆ ನವಜೊಡಿ ಜಾಗೃತಿವಹಿಸಿ ಸಂದೇಶ ಪ್ರಕಟಿಸಿರುವುದು ವಿಶೇಷವಾಗಿದೆ.
ವಿಜಯ್ ಸಿಂಗ್ ಮತ್ತು ವೈಶಾಲಿ ಎಂಬ ನವಜೋಡಿ ಇದೇ ಏಪ್ರಿಲ್ 24 ರಂದು ಜೈಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನವಜೋಡಿ ಮದುವೆ ಆಮಂತ್ರಣ ಪತ್ರದಲ್ಲಿ, ಮದುವೆಗೆ ಆಗಮಿಸುವ ಅತಿಥಿಗಳು ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿ ತರುವಂತೆ ವಿನಂತಿಸಿಕೊಂಡಿದ್ದಾರೆ. ಎಲ್ಲರೂ ದಯವಿಟ್ಟು ಟೆಸ್ಟ್ ರಿಪೋರ್ಟ್ ಹಿಡಿದುಕೊಂಡು ಮದುವೆಗೆ ಬನ್ನಿ ಎಂದು ತಿಳಿಸಿದ್ದಾರೆ.
ಮದುವೆ ಆಮಂತ್ರಣ ಪತ್ರವನ್ನು ವಿತರಿಸುವ ಮೊದಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಭೆ ಸಮಾರಂಭ, ವಿವಾಹ ಕಾರ್ಯಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಬಗ್ಗೆ ನಮಗೆ ತಿಳಿದಿತ್ತು. ಎಲ್ಲಾ ಮಾರ್ಗಸೂಚಿಗಳನ್ನು ಮದುವೆ ಸಮಾರಂಭದಲ್ಲಿ ನಾವು ಅನುಸರಿಸುತ್ತೇವೆ ಎಂದು ವರ ವಿಜಯ್ ಹೇಳಿದ್ದಾರೆ.
ಮದುವೆಗೆ 300-400 ಜನರನ್ನು ಆಹ್ವಾನಿಸಲು ನಿರ್ಧರಿಸಿದ್ದೆವು. ಆದರೀಗ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ 30-40 ಜನರಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡಲಾಗುತ್ತಿದೆ ಎಂದು ವಧು ವೈಶಾಲಿ ಹೇಳಿದ್ದಾರೆ.
ಸಾಂಕ್ರಾಮಿಕ ರೋಗ ಅತ್ಯಂತ ಶೀಘ್ರಗತಿಯಲ್ಲಿ ಹರಡುತ್ತಿದೆ. ಹೀಗಾಗಿ ನಾವು ಅತ್ಯಂತ ಜಾಗರೂಕರಾಗಿ ಇರಬೇಕಿದೆ. ನಮ್ಮ ಶ್ರಮವು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಆಗಿದೆ. ಸೋಂಕಿನಿಂದ ಜನರು ತಪ್ಪಿಸಿಕೊಳ್ಳಲು ಸಹಾಯವಾಗಲಿಗೆ ಎಂದು ತಿಳಿಸಿದ್ದಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


