ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ
ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ ಕುರಿತಂತೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ಹಿರಿಯ ಕಾಂಗ್ರೆಸ್ ಮುಖಂಡರು ಅವರ ನಿಲುವಿಗೆ ದೊಡ್ಡ ಅಪಚಾರ ಮಾಡಿದ್ದಾರೆ ಎಂದಿದ್ದಾರೆ.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವವನ್ನು ಸಿಂಗ್ ಅರ್ಥ ಮಾಡಿಕೊಂಡಿರುವುದನ್ನು ಒಪ್ಪುತ್ತೇನೆ. ಕೆಲ ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳಲ್ಲಿ ಹಿರಿಯ ನಾಗರಿಕರು, ಮುಂಚೂಣಿ ಕಾರ್ಯಕರ್ತರಿಗೂ ಕೂಡಾ ಲಸಿಕೆ ಹಾಕಿಲ್ಲ ಎಂದು ಹೇಳಿದ್ದಾರೆ.
ಸಿಂಗ್ ಅವರಿಗೆ ಟ್ವೀಟ್ ಮಾಡಿರುವ ಹರ್ಷವರ್ಧನ್,ನಿಮ್ಮ ರಚನಾತ್ಮಕ, ಅಮೂಲ್ಯವಾದ ಸಲಹೆಗಳನ್ನು ಕಾಂಗ್ರೆಸ್ ಮುಖಂಡರು ಪಾಲಿಸಿದರೆ ಇತಿಹಾಸವು ನಿಮಗೆ ದಯೆವುಳ್ಳದಾಗಿರುತ್ತದೆ ಎಂದು ಹೇಳಿದ್ದಾರೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಡಾ. ಮನ್ ಮೋಹನ್ ಸಿಂಗ್, ವಾಕ್ಸಿನೇಷನ್ ಹೆಚ್ಚಳ ಸೇರಿದಂತೆ ಕೋವಿಡ್-19 ಬಿಕ್ಕಟ್ಟು ಹೋರಾಟದದ ನಾಲ್ಕು ಕ್ರಮಗಳನ್ನು ಸಲಹೆ ನೀಡಿದ್ದರು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ನಿಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲುತ್ತಿಲ್ಲ ಎಂದು ಹರ್ಷವರ್ಧನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


