ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಕೊರೋನಾಗೆ ಬಲಿ
ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಅವರು ಸೋಮವಾರ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ.

ಪಿಲಿಬಿತ್: ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಅವರು ಸೋಮವಾರ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 70 ವರ್ಷದ ಗೋಪಾಲಕೃಷ್ಣ ಸಕ್ಸೆನಾ ಅವರಿಗೆ ಇತ್ತೀಚಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.
"ಲಖನೌದಲ್ಲಿ ಸರಿಯಾದ ಚಿಕಿತ್ಸೆ ಪಡೆಯಲು ಸಾಧ್ಯವಾಗದಿದ್ದಾಗ, ಅವರನ್ನು ಶನಿವಾರ ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು" ಎಂದು ಅವರ ಪುತ್ರ ರಜತ್ ಸಕ್ಸೆನಾ ಅವರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನ್ನನ್ನ ತಂದೆಗೆ ಉಸಿರಾಟದ ತೊಂದರೆ ಇದೆ ಮತ್ತು ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿತ್ತು ಎಂದು ಅವರು ಹೇಳಿದ್ದಾರೆ.
ಗೋಪಾಲಕೃಷ್ಣ ಸಕ್ಸೆನಾ ಅವರು ಪುರಾಣಪುರ ಕ್ಷೇತ್ರದ ಶಾಸಕರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


