ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!
ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.

ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.
ಹೌದು.. ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವದರಿಂದ ರಾಜ್ಯ ಸರ್ಕಾರ ಈ ಆರು ರಾಜ್ಯಗಳನ್ನು 'ಸೂಕ್ಷ್ಮ ವಲಯಗಳು' ಎಂದು ವರ್ಗೀಕರಿಸಿದೆ. ಕೊರೋನವೈರಸ್ ಹರಡುವುದನ್ನು ನಿಯಂತ್ರಿಸಲು ಈ ರಾಜ್ಯಗಳಿಂದ ರೈಲ್ವೆ ಪ್ರಯಾಣಿ ಮಾಡುವವರಿಗೆ ಹೊಸ ಎಸ್‌ಒಪಿ ಜರಿ ಮಾಡಲಾಗಿದೆ.
ಅಂತೆಯೇ ಮಹಾರಾಷ್ಟ್ರಕ್ಕೆ ಬರುವ 48 ಗಂಟೆಗಳ ಮೊದಲು ಮಾಡಿಸಲಾದ ಕೋವಿಡ್-19 ನೆಗೆಟಿವ್ ರಿಪೋರ್ಟ್ ಅಥವಾ ಆರ್‌ಟಿ-ಪಿಸಿಆರ್ ಟೆಸ್ಟ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂದು ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರು, 'ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ನೆಗೆಟಿವ್ ರಿಪೋರ್ಟ್ ಅಥವಾ ಆರ್‌ಟಿ-ಪಿಸಿಆರ್ ಟೆಸ್ಟ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಮತ್ತು ಯಾವುದೇ ರೋಗ ಲಕ್ಷಣವಿಲ್ಲದ ಪ್ರಯಾಣಿಕರು ಮಾತ್ರ ಮಹಾರಾಷ್ಟ್ರಕ್ಕೆ ರೈಲುಗಳನ್ನು ಹತ್ತಲು ಅವಕಾಶವಿರುತ್ತದೆ. ಬೋರ್ಡಿಂಗ್ / ಡಿಬೋರ್ಡಿಂಗ್ ಮತ್ತು ಪ್ರಯಾಣದ ಸಮಯದಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿರಬೇಕು' ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಈ ಆರು ರಾಜ್ಯಗಳಿಂದ ಚಲಿಸುವ ರೈಲುಗಳಲ್ಲಿ ಮಹಾರಾಷ್ಟ್ರಕ್ಕೆ ಯಾವುದೇ ಕಾಯ್ದಿರಿಸಲಾಗದ ಟಿಕೆಟ್ ನೀಡಬಾರದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


