ಶಬ್ದಬ್ರಹ್ಮ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನ: ಪ್ರಧಾನಿ ಮೋದಿ ಕಂಬನಿ
ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಸಮೃದ್ಧ ಬರಹಗಾರ ಮತ್ತು ಚಿಂತಕರಾಗಿದ್ದರು, ಕನ್ನಡ ಭಾಷೆ, ಸಾಹಿತ್ಯವನ್ನು ಜನಪ್ರಿಯಗೊಳಿಸಲು ಅವರು ಮಾಡಿದ್ದ ಕೆಲಸ ಅಪರಿಮಿತ.. ಕೆಲಸದ ಬಗ್ಗೆ ಅಪಾರ ಒಲವು ಹೊಂದಿದ್ದ ಅವರು ಯುವಜನತೆಗೆ ಪ್ರೇರಣೆಯಾಗಿದ್ದರು. ಅವರ ನಿಧನ ಸಂದರ್ಭದಲ್ಲಿ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


