ವಿಡಿಯೋ: ರೈಲು ಬರುವ ವೇಳೆ ಹಳಿ ಮೇಲೆ ಬಿದ್ದ ಮಗು ರಕ್ಷಿಸಿದ ರೈಲ್ವೆ ಸಿಬ್ಬಂದಿ, ಪಿಯೂಷ್ ಗೋಯಲ್ ಮೆಚ್ಚುಗೆ
ರೈಲ್ವೆ ಸಿಬ್ಬಂದಿಯೊಬ್ಬರು ತನ್ನ ಪ್ರಾಣ ಪಣಕ್ಕಿಟ್ಟು ರೈಲು ಬರುತ್ತಿದ್ದ ವೇಳೆಯೇ ಆಯತಪ್ಪಿ ಹಳಿ ಮೇಲೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ.

ಮುಂಬೈ: ರೈಲ್ವೆ ಸಿಬ್ಬಂದಿಯೊಬ್ಬರು ತನ್ನ ಪ್ರಾಣ ಪಣಕ್ಕಿಟ್ಟು ರೈಲು ಬರುತ್ತಿದ್ದ ವೇಳೆಯೇ ಆಯತಪ್ಪಿ ಹಳಿ ಮೇಲೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ.
ಮುಂಬೈನ ವಂಗಾನಿ ರೈಲು ನಿಲ್ದಾಣದಲ್ಲಿ ನಡೆದ ಈ ಭಯಾನಕ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಈಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಗಮನ ಸೆಳೆದಿದೆ.
ಅಂಧ ಮಹಿಳೆ ಮತ್ತು ಮಗು ಫ್ಲಾಟ್ ಫಾರ್ಮ್‌ನಲ್ಲಿ ನಡೆದುಕೊಂಡು ಹೋಗುವ ವೇಳೆ ಆಯತಪ್ಪಿ ಬಿದ್ದ ಮಗುವೊಂದನ್ನು ಇನ್ನೇನು ರೈಲು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ರೈಲ್ವೆ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ಮಗುವಿನ ಜೀವ ಉಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ, ವಂಗಾನಿ ರೈಲ್ವೆ ಸ್ಟೇಷನ್‌ನ ಫ್ಲಾಟ್‌ಫಾರ್ಮ್ ನಂಬರ್ 2ರಲ್ಲಿ ತನ್ನ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಗುವೊಂದು ಸಮತೋಲನ ಕಳೆದುಕೊಂಡು ರೈಲ್ವೆ ಹಳಿ ಮೇಲೆ ಬಿದ್ದಿದೆ. ಆಗ ಮುಂಬೈ ವಿಭಾಗದ ಮಯೂರ್ ಶೆಲ್ಖೆ ಅವರು ಮಗುವನ್ನು ರಕ್ಷಿಸುವ ಮೂಲಕ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದೆ. ಅಲ್ಲದೆ ಘಟನೆಯ ವಿಡಿಯೊವನ್ನು ಹಂಚಿಕೊಂಡಿದೆ.
ಧೈರ್ಯಶಾಲಿ ಕಾರ್ಯವನ್ನು ಮಾಡಿದ ಮುಂಬೈನ ವಂಗಾನಿ ರೈಲ್ವೆ ನಿಲ್ದಾಣದ ರೈಲ್ವೆಮ್ಯಾನ್ ಮಯೂರ್ ಶೆಲ್ಖೆ ಅವರ ಬಗ್ಗೆ ತುಂಬಾ ಹೆಮ್ಮೆಯಾಗುತ್ತಿದೆ. ಅವರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ ಮತ್ತು ಮಗುವಿನ ಜೀವ ಉಳಿಸಿದ್ದಾರೆ ಎಂದು ಪಿಯೂಷ್ ಗೋಯಲ್ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


