ದೇಶ

5 ಜಿಲ್ಲೆಗಳಲ್ಲಿ ಲಾಕ್ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

5 ಜಿಲ್ಲೆಗಳಲ್ಲಿ ಲಾಕ್ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಸುಪ್ರೀಂಕೋರ್ಟ್
Published On :

ನವದೆಹಲಿ: ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. 

ನಿನ್ನೆಯಷ್ಟೇ ಆದೇಶ ಹೊರಡಿಸಿದ್ದ ಅಲಹಾಬಾದ್ ಹೈಕೋರ್ಟ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಣಾಸಿ ಮತ್ತು ಗೋರಖ್‌ಪುರದಲ್ಲಿ ಏ.10-ಏ.26ರವರೆಗೆ ಲಾಕ್ಡೌನ್ ಜಾರಿಗೆ ಸೂಚನೆ ನೀಡಿತ್ತು. 

ಆದರೆ, ಈ ಆದೇಶಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ನ್ಯಾಯಾಲಯದ ಆದೇಶದಿಂದ ಬಡವರು ಮತ್ತು ಜನ ಸಾಮಾನ್ಯರ ಜೀವನಕ್ಕೆ ತೊಂದರೆಯಾಗಲಿದೆ ಎಂದು ಪ್ರತಿಪಾದಿಸಿತ್ತು. ಅಲ್ಲದೆ, ಸರ್ಕಾರ ಪೂರ್ಣ ಪ್ರಮಾಣದ ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿತ್ತು. ಬಳಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. 

ಇದರಂತೆ ಈ ಕುರಿತಂತೆ ವಿಚಾರಣೆ ನಡೆಸಲು ಇಂದು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಕೊರೋನಾ ಸೋಂಕು ನಿಯಂತ್ರಿಸಲು ಸರ್ಕಾರ ತೆಗೆದುಕೊಂಡಿರುವ ಹಲವು ಕ್ರಮಗಳ ಕುರಿತು ವಾರದೊಳಗೆ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ಸೂಚನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.