ಬಂಗಾಳ ಚುನಾವಣೆ: ಉತ್ತರ 24 ಪರಗಣದಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, 6 ಮಂದಿಗೆ ಗಾಯ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಗುರುವಾರ ಆರನೇ ಹಂತದ ಮತದಾನ ನಡೆದಿದ್ದು, ಹಲವು ಕಡೆ ಹಿಂಸಾಚಾರ ನಡೆದ ಘಟನೆಗಳು ವರದಿಯಾಗಿವೆ.

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಗುರುವಾರ ಆರನೇ ಹಂತದ ಮತದಾನ ನಡೆದಿದ್ದು, ಹಲವು ಕಡೆ ಹಿಂಸಾಚಾರ ನಡೆದ ಘಟನೆಗಳು ವರದಿಯಾಗಿವೆ.
ಉತ್ತರ 24 ಪರಗಣದಲ್ಲಿ ಕೆಲವು ದುಷ್ಕರ್ಮಿಗಳು ನಿರ್ದಾಕ್ಷಿಣ್ಯವಾಗಿ ಹಲವು ಬಾಂಬ್ ಎಸೆದಿದ್ದು, ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ನಂತರ ಭಾರೀ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಸಿಎಪಿಎಫ್ ಜವಾನರು ಸ್ಥಳಕ್ಕೆ ಆಗಮಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಟಿಟಾಗಢದ ಟಾಟಾ ಗೇಟ್ ಬಳಿ ಅಪರಿಚಿತ ವ್ಯಕ್ತಿಗಳು ಮುಖವಾಡ ಧರಿಸಿ ಹಲವು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
"ಗಾಯಾಗೊಂಡವರನ್ನು ಬಿಎನ್ ಬೋಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ" ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


