ಕೋವಿಶೀಲ್ಡ್ ಬೆಲೆ ಏರಿಕೆ: ಸೆರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ 'ಡಕಾಯಿತ' ಎಂದ ಬಿಜೆಪಿ ಶಾಸಕ
ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಹೆಚ್ಚಿಸಿದ್ದರಿಂದ ತೀವ್ರ ಆಕ್ರೋಶಗೊಂಡ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು, ಕೋವಿಡ್ ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆಧಾರ್ ಪೂನಾವಾಲಾ ಅವರನ್ನು...

ಲಖನೌ: ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಹೆಚ್ಚಿಸಿದ್ದರಿಂದ ತೀವ್ರ ಆಕ್ರೋಶಗೊಂಡ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು, ಕೋವಿಡ್ ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆಧಾರ್ ಪೂನಾವಾಲಾ ಅವರನ್ನು 'ಡಕಾಯಿತ' ಎಂದು ಕರೆದಿದ್ದಾರೆ. ಅಲ್ಲದೆ ಆ ಕಂಪನಿಯನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ "ಸ್ವಾಧೀನಪಡಿಸಿಕೊಳ್ಳುವಂತೆ" ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಿಗೆ ಕೋವಿಶೀಲ್ಡ್ ಸರಬರಾಜಿಗೆ ಪ್ರತಿ ಡೋಸ್‌ಗೆ 600 ರೂ. ಮತ್ತು ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್ ಗೆ 400 ರೂ. ಎಂದು ಎಸ್‌ಐಐ ಬುಧವಾರ ಘೋಷಿಸಿದ ನಂತರ ಗೋರಖ್‌ಪುರ ಶಾಸಕ ರಾಧಾ ಮೋಹನ್ ದಾಸ್ ಅಗ್ರವಾಲ್ ಈ ಹೇಳಿಕೆ ನೀಡಿದ್ದಾರೆ.
ಆಧಾರ್ ಪೂನಾವಾಲಾ ನೀವು ಡಕಾಯಿತರಿಗಿಂತ ಕೆಟ್ಟವರು. ಸಾಂಕ್ರಾಮಿಕ ಕಾಯ್ದೆಯಡಿ ನಿಮ್ಮ ಕಂಪನಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಕಚೇರಿ, ಅಮಿತ್ ಶಾ, ಬಿಎಲ್ ಸಂತೋಷ್, ಹರ್ಷವರ್ಧನ್ ಅವರನ್ನು ಟ್ಯಾಗ್ ಮಾಡಿ ಬಿಜೆಪಿ ಶಾಸಕ ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್‌ಗಳಲ್ಲಿ, ಕೃಷಿ ವೆಚ್ಚಗಳು ಮತ್ತು ಬೆಲೆಗಳಿಗಾಗಿ ಸ್ವಾಮಿನಾಥನ್ ಆಯೋಗದ ಸೂತ್ರವನ್ನು ಅಗ್ರವಾಲ್ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


